ಕರ್ಮಭೂಮಿಗೆ ಮರಳಿದ ಉದ್ಯಮಿ ಬಿ.ಆರ್.ಶೆಟ್ಟಿ

ಮಂಗಳೂರು: ಪ್ರಖ್ಯಾತ ಉದ್ಯಮಿ ಬಿ. ಆರ್ ಶೆಟ್ಟಿ ಮರಳಿ ಕರ್ಮಭೂಮಿಗೆ ತೆರಳಿದ್ದಾರೆ. ಬುಧ್ವಾರದಂದು ಯುಎಇಗೆ ಮರಳಿ ಆಗಮಿಸಿದ್ದು, ಕರ್ನಾಟಕ ಸಂಘ ದುಬೈ ತಂಡವು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದೆ. ತುಳುನಾಡಿನ ಉಡುಪಿ ಜಿಲ್ಲೆಯಿಂದ ಯುಎಇಗೆ ಬಂದು ಯಶಸ್ವಿ ಉದ್ಯಮಿಯಾಗಿ ಸಾವಿರಾರು ಅನಿವಾಸಿ ಕನ್ನಡಿಗರಿಗೆ ಉದ್ಯೋಗವಕಾಶ ಕಲ್ಪಿಸಿದ್ದ ಬಿ.ಆರ್ ಶೆಟ್ಟಿಯವರು ಅಬುಧಾಬಿ ಸರ್ಕಾರ ಸೌಹಾರ್ದತೆಯ ಪ್ರತೀಕವಾಗಿ ನೀಡಿದ ಜಾಗದಲ್ಲಿ ಭವ್ಯ ಹಿಂದೂ ಮಂದಿರ ರಚನೆಯ ಸಮಿತಿಯ ಮುಖ್ಯಸ್ಥರಾಗಿ ಮಂದಿರ ಶಿಲಾನ್ಯಾಸ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಇದೀಗ ಮಂದಿರ ಉದ್ಘಾಟನೆ ಸಂದರ್ಭದಲ್ಲೇ […]

ಉಡುಪಿಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಉಡುಪಿ: ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ತಾಯಿ ಮಕ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿಯೊಬ್ಬರು ಗುರುವಾರದಂದು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತ್ರಿವಳಿ ಮಕ್ಕಳು ಮತ್ತು ತಾಯಿಯ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಉ.ಕ ಜಿಲ್ಲೆಯ ಅಂಕೋಲಾ ನಿವಾಸಿ ಸುನಿತಾ (27) ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ. ಡಾ.ಕವಿಷಾ ಭಟ್, ಡಾ ರಜನಿ ಕಾರಂತ್, ಡಾ ಸೂರ್ಯನಾರಾಯಣ್, ಡಾ.ಗಣಪತಿ ಹೆಗಡೆ ಹಾಗೂ ಡಾ. ಮಹಾದೇವ ಭಟ್ ಅವರನ್ನು ಒಳಗೊಂಡ ತಜ್ಞ ವೈದ್ಯರ […]

ಬಿ.ಆರ್.ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರಕಾರದ ತೆಕ್ಕೆಗೆ

ಉಡುಪಿ: ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ರಾಜ್ಯ ಸರಕಾರ ತನ್ನ ವಶಕ್ಕೆ ಪಡೆದು ಅಧಿಕೃತ ಆದೇಶವನ್ನು ಹೊರಡಿಸಿದೆ. ಸಚಿವ ಸಂಪುಟ ಸಭೆಯ ನಿರ್ಣಯದಂತೆ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇದರ ನಿರ್ವಹಣೆಯನ್ನು ಸರಕಾರದ ಸುಪರ್ದಿಗೆ ಪಡೆಯಲಾಗಿದೆ. ಉಡುಪಿ ಜಿಲ್ಲೆ ಕಸಬಾ ತಾಲೂಕಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿರುವ ಸುಮಾರು 4 ಎಕರೆ ಜಮೀನನ್ನು ಕೂಡಾ […]