ಆಗ ಪೇಸಿಎಂ; ಈಗ ಸೇಸಿಎಂ: ಸರಕಾರದ ವಿರುದ್ದ ಕಾಂಗ್ರೆಸ್ ನಿಂದ ಮತ್ತೊಂದು ಅಸ್ತ್ರ

ಬೆಂಗಳೂರು: ‘ಪೇಸಿಎಂ’ ಅಭಿಯಾನದ ನಂತರ, ಕಾಂಗ್ರೆಸ್‌ನ ಕರ್ನಾಟಕ ಘಟಕವು ಪ್ರತಿಪಕ್ಷಗಳು ಕೇಳಿದ 50 ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳಿಂದ ಉತ್ತರವನ್ನು ಕೋರಿ ‘ಸೇಸಿಎಂ’ ಅಭಿಯಾನವನ್ನು ಪ್ರಾರಂಭಿಸಿದೆ. ಕ್ಯೂಆರ್ ಕೋಡ್ ಸ್ವರೂಪದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಛಾಯಾಚಿತ್ರದೊಂದಿಗೆ ಪೇಸಿಎಂ ಅಭಿಯಾನದ ಅದೇ ಗ್ರಾಫಿಕ್ ಅನ್ನು ಪ್ರಚಾರಕ್ಕೆ ಬಳಸಲಾಗಿದೆ. “ಸೇಸಿಎಂ 90% ಈಡೇರಿಸಲಾಗಿಲ್ಲ”, “ಸಿಎಂ ಮಾತನಾಡಲು ನಾವು ಪೇಸಿಎಂ ಮಾಡಬೇಕೇ” ಎಂದು ಪ್ರಶ್ನಿಸಲಾಗಿದೆ. ಬಿಜೆಪಿ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಭರವಸೆಗಳಲ್ಲಿ ಶೇ 10 ರಷ್ಟನ್ನು ಕೂಡಾ ಈಡೇರಿಸಲು […]

ಅಕ್ಟೋಬರ್ 13 ರಿಂದ16 ರವರೆಗೆ ದಕ್ಷಿಣ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ: ಲಾಂಛನ ಬಿಡುಗಡೆ

ಮಂಡ್ಯ: ಇಲ್ಲಿನ ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶುಕ್ರವಾರದಂದು ಬಿಡುಗಡೆಗೊಳಿಸಿದರು. ಅಕ್ಟೋಬರ್ 13,14,15,16 ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ-ಹೇಮಾವತಿ-ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿದಿನ ಗಂಗಾರತಿ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಹಾಕುಂಭಮೇಳದ ವಿಶೇಷ ಲಾಂಛನ ಸಿದ್ದಪಡಿಸಲಾಗಿದೆ. ಮಹಾಕುಂಭಮೇಳದ ಸಿದ್ದತೆ ಕುರಿತು ಬೊಮ್ಮಾಯಿಯವರು ಮಾಹಿತಿ ಪಡೆದುಕೊಂಡಿದ್ದಾರೆ. ಇದು ರಾಜ್ಯದ ಮಹತ್ವದ […]

ಪ.ಜಾತಿ/ಪ.ಪಂಗಡದ ಮೀಸಲಾತಿ ಏರಿಕೆಗೆ ರಾಜ್ಯ ಸರ್ಕಾರ ನಿರ್ಧಾರ: ಪ.ಜಾತಿಗೆ 17ಶೇ ಮತ್ತು ಪ.ಪಂಗಡಕ್ಕೆ 7ಶೇ ಏರಿಕೆ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಸಂಬಂಧಿಸಿದಂತೆ ಸರ್ವ ಪಕ್ಷ ಸಭೆಯಲ್ಲಿ ಕಾನೂನು ಮತ್ತು ಸಂವಿಧಾನಾತ್ಮಕವಾಗಿ ಮೀಸಲಾತಿ ಹೆಚ್ಚಿಸುವ ಕುರಿತು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನ್ಯಾ.ನಾಗಮೋಹನ್ ದಾಸ್ ವರದಿ ಪ್ರಕಾರ ಪರಿಶಿಷ್ಟ ಜಾತಿ ಸಮುದಾಯಕ್ಕೆ ಶೇ.15 ರಿಂದ ಶೇ.17 ‌ಹಾಗೂ ಪರಿಶಿಷ್ಟ ಪಂಗಡ ಸಮುದಾಯಕ್ಕೆ ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದ್ದು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದ […]

ಸಿ.ಆರ್.ಝೆಡ್ ವಿಸ್ತರಣೆಯಿಂದ ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಬೊಮ್ಮಾಯಿ

ನವದೆಹಲಿ: ಕರಾವಳಿ ನಿಯಂತ್ರಣಾ ವಲಯ ವಿಸ್ತರಣೆಯನ್ನು ರಾಜ್ಯದ ಕರಾವಳಿ ಪ್ರದೇಶಗಳಿಗೂ ಪಡೆಯಲು ಚೆನ್ನೈನ ಪ್ರಾದೇಶಿಕ ಕಚೇರಿಯಿಂದ ಅನುಮತಿ ದೊರೆತಿದ್ದು, ಇದರಿಂದ ಕರಾವಳಿ ಪ್ರದೇಶ ಅಭಿವೃದ್ಧಿಗೊಳ್ಳಲಿದೆ. ಗೋವಾ ಹಾಗೂ ಕೇರಳಗಳಲ್ಲಿ ಕರಾವಳಿ ನಿಯಂತ್ರಣಾ ವಲಯ ( ಸಿ ಆರ್ ಝೆಡ್ ) ವಿಸ್ತರಣೆಗೆ ಅನುಮತಿ ನೀಡಿರುವುದರಿಂದ ಹೋಟೆಲ್ ಉದ್ಯಮ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗಿದೆ. ಇದೇ ರೀತಿ ರಾಜ್ಯದ ಕರಾವಳಿ ಪ್ರದೇಶಗಳಿಗೂ ಸಿ ಆರ್ ಝೆಡ್ ವಿಸ್ತರಣೆ ಪಡೆಯಲು ಗಂಭೀರ ಪ್ರಯತ್ನಗಳನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ […]

“ಕರ್ನಾಟಕ ಉದ್ಯೋಗ ನೀತಿ 2022-25”: ಉದ್ಯೋಗಾವಕಾಶ ಹೆಚ್ಚಳಕ್ಕಾಗಿ ರಾಜ್ಯ ಸಚಿವ ಸಂಪುಟದ ಅನುಮೋದನೆ

ಬೆಂಗಳೂರು: ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ “ಕರ್ನಾಟಕ ಉದ್ಯೋಗ ನೀತಿ 2022-25” ಅನ್ನು ಅನುಮೋದಿಸಿದೆ ಮತ್ತು ಹೆಚ್ಚಿನ ಉದ್ಯೋಗಗಳನ್ನು ಒದಗಿಸಲು ರಾಜ್ಯದಲ್ಲಿ ಹೊಸ ಘಟಕಗಳನ್ನು ವಿಸ್ತರಿಸಲು ಅಥವಾ ಸ್ಥಾಪಿಸಲು ಕೈಗಾರಿಕೆಗಳಿಗೆ ಸೂಚನೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವತ್ತ ಅವರು ಗಮನಹರಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಸಭೆಯ ನಂತರ ಕಾನೂನು ಮತ್ತು […]