ಸರ್ಕಾರ ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಿದೆ: ಸಿಎಂ ಬೊಮ್ಮಾಯಿ
ಮೈಸೂರು: ರಾಜ್ಯ ಸರ್ಕಾರವು ಶೀಘ್ರವೇ ಲೋಕಾಯುಕ್ತರನ್ನು ನೇಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ. ಮಂಡಕಳ್ಳಿಯಲ್ಲಿರುವ ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಲೋಕಾಯುಕ್ತರ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿಯೇ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯಸಭಾ ಚುನಾವಣೆಯಲ್ಲಿ ಎಲ್ಲಾ ಮೂರು ಬಿಜೆಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲ್ಲಲಿದ್ದಾರೆ, ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಆಫರ್‌ಗಳಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.
ಕಾರ್ಕಳ: ಹೆಬ್ರಿ ತಾಲೂಕು ನೂತನ ಆಡಳಿತ ಸೌಧ ಕಟ್ಟಡ ಲೋಕಾರ್ಪಣೆ
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನೂತನ ಆಡಳಿತ ಸೌಧ ಕಟ್ಟಡವನ್ನು ಬುಧವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ತದನಂತರ ಹೆಬ್ರಿಯ ಸುಸಜ್ಜಿತ ಬಸ್ ನಿಲ್ದಾಣ ಕಾಮಗಾರಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತರಗತಿ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್ , ನೀರಾವರಿ ಸಚಿವ ಗೋವಿಂದ ಕಾರಜೋಳ , ಇಂಧನ ಸಚಿವ ಸುನಿಲ್ ಕುಮಾರ್ , ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಸಚಿವ […]