ಮಾತೃಪಕ್ಷಕ್ಕೆ ಮರಳಿದ ಅರುಣ್ ಕುಮಾರ್ ಪುತ್ತಿಲ? ಬಿಜೆಪಿ ಪಾಳಯದಲ್ಲಿ ಗೊಂದಲ!! ಮೋದಿ ಗೆಲ್ಲಿಸಲು ಸಜ್ಜಾದ ಪುತ್ತಿಲ ಪರಿವಾರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಬಲ ನಾಯಕ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಬಿಜೆಪಿ (BJP) ಸೇರ್ಪಡೆ ವಿಚಾರದಲ್ಲಿ ಗೊಂದಲ ಉಂಟಾಗಿದೆ. ಅರುಣ್ ಕುಮಾರ್ ಪುತ್ತಿಲ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭೇಟಿಯಾಗಿದ್ದು, ಪುತ್ತಿಲ ಬಿಜೆಪಿಗೆ ಮರಳಲಿದ್ದಾರೆ ಎನ್ನಲಾಗಿತ್ತು. ಆದರೆ ಶುಕ್ರವಾರ ಪುತ್ತೂರಿನಲ್ಲಿ ನಡೆದ ಸಭೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರ ಬೆದರಿಕೆ ನಂತರ ಪುತ್ತಿಲ ಪಕ್ಷ ಸೇರ್ಪಡೆ ಮಾಧ್ಯಮದ ವರದಿಯಷ್ಟೇ ಎಂದು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿ ಉಲ್ಟಾ ಹೊಡೆದಿದ್ದರು. ಇದೀಗ ಪುತ್ತಿಲ ಅವರು […]
ಬಾಂಬ್ ಸ್ಪೋಟ ವಿಚಾರದಲ್ಲಿ ರಾಜಕೀಯವಿಲ್ಲ; ಸರ್ಕಾರ ತನಿಖೆಯಲ್ಲಿ ವಿಳಂಬ ತೋರುವುದು ತರವಲ್ಲ: ಬಿ.ವೈ ವಿಜಯೇಂದ್ರ
ಬೆಂಗಳೂರು: ಬಾಂಬ್ ಸ್ಫೋಟ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದು ಈಗಾಗಲೇ ಹೇಳಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ಎಸ್ಎಲ್ ವರದಿ ಬಂದಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು, ದೃಢಪಟ್ಟ ಮಾಹಿತಿ ನಮಗಿದೆ. ಎಲ್ಲೋ ಒಂದು ಕಡೆ ಈ ರಾಜ್ಯ ಸರ್ಕಾರದ ವಿಳಂಬ ನೀತಿ, ನಡವಳಿಕೆ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂಬಂತಿದೆ. ದೇಶದ್ರೋಹಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ […]
ಲೋಕಸಭಾ ಚುನಾವಣೆ ಹಿನ್ನೆಲೆ: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಮೊದಲ ಕಾರ್ಯಕಾರಿಣಿ ಸಭೆ
ಬೆಂಗಳೂರು: ಬಿ.ವೈ.ವಿಜಯೇಂದ್ರ ಭಾಜಪಾದ ರಾಜ್ಯಾಧ್ಯಕ್ಷ ಹುದ್ದೆಗೆ ನೇಮಕಗೊಂಡು ರಾಜ್ಯ ಪದಾಧಿಕಾರಿಗಳ ತಂಡ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಶನಿವಾರ ನಡೆಯಲಿದೆ. ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯುವ ಕಾರ್ಯಕಾರಿಣಿ ಸಭೆಯಲ್ಲಿ 900ಕ್ಕೂ ಹೆಚ್ಚು ಆಹ್ವಾನಿತರು ಭಾಗವಹಿಸಲಿದ್ದಾರೆಂದು ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ. ಶುಕ್ರವಾರ ಕಾರ್ಯಾಕಾರಿಣಿ ನಡೆಯುವ ಸ್ಥಳದಲ್ಲಿನ ಸಿದ್ಧತೆಗಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ಮುಂದಿನ ಕಾರ್ಯ […]
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ನೇಮಕ
ಹೊಸದಿಲ್ಲಿ: ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಪಕ್ಷವು ತನ್ನ ಹೊಸ ರಾಜ್ಯಾಧ್ಯಕ್ಷರ ನೇಮಕ ಮಾಡಿದೆ. ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪಕ್ಷದ ವರಿಷ್ಠ ನಾಯಕ ಯಡಯೂರಪ್ಪ ನವರ ಪುತ್ರ ಬಿ. ವೈ ವಿಜಯೇಂದ್ರ ಅವರ ನೇಮಕವಾಗಿದೆ. ಶಿಕಾರಿಪುರ ಶಾಸಕರಾಗಿರುವ ಯುವ ನಾಯಕ ಬಿ.ವೈ ವಿಜಯೇಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾಧ್ಯಕ್ಷರಾಗಿ ನೇಮಿಸಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ನಡೆದು ತಿಂಗಳುಗಳೇ ಕಳೆದರೂ ಹೊಸ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರ […]