ವಾತಾವರಣ ಶುದ್ದಗೊಳಿಸಲು ತುಳಸಿ-ಅಮೃತಬಳ್ಳಿ ನೆಡಬೇಕು: ಬಾಬಾ ರಾಮ್ ದೇವ್

ಉಡುಪಿ: ಮನೆಯ ಆವರಣದಲ್ಲಿ ಅಗಾಧವಾದ ಔಷಧೀಯ ಗುಣ ಹೊಂದಿರುವ ತುಳಸಿ, ಅಲೆವೇರಾ, ಅಮೃತಬಳ್ಳಿಗಳನ್ನು ಬೆಳೆಸುವುದರಿಂದ ವಾತಾವರಣವನ್ನು ಶುದ್ಧಗೊಳಿಸಲು ಸಾಧ್ಯ. ದೆಹಲಿಯ ಕಲುಷಿತ ವಾತಾವರಣ ದೂರ ಮಾಡಲು ಮೊದಲು ಈ ಕೆಲಸ ಮಾಡಬೇಕು ಎಂದು ಯೋಗಗುರು ಬಾಬಾ ರಾಮ್‌ದೇವ್‌ ಹೇಳಿದರು. ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪಲಿಮಾರು ಮಠ ಹಾಗೂ ಹರಿದ್ವಾರದ ಪತಂಜಲಿ ಯೋಗ ಪೀಠ ಟ್ರಸ್ಟ್‌ನ ಜಂಟಿ ಆಶ್ರಯದಲ್ಲಿ ಶ್ರೀಕೃಷ್ಣ ಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಎರಡನೆ ದಿನವಾದ ಭಾನುವಾರ ಮುಂಜಾನೆ ನಡೆದ ಯೋಗ ಶಿಬಿರದಲ್ಲಿ ಅವರು ಮಾತನಾಡಿದರು. ಡೆಂಗಿ, […]