ಡಿ.6: ಬಾಬರಿ‌ ಮಸೀದಿ ದ್ವಂಸ ದಿನ; ಮುಂಜಾಗ್ರತಾ ಕ್ರಮವಾಗಿ ನಿರ್ಬಂಧಕಾಜ್ಞೆ ಜಾರಿ

ಮಂಗಳೂರು: ಡಿಸೆಂಬರ್ 6 ರಂದು ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಕರಾಳ ದಿನ ಆಚರಿಸುವ ಹಾಗೂ ಹಿಂದೂ ಸಂಘಟನೆಗಳು ವಿಜಯೋತ್ಸವ ಆಚರಿಸುವ ಸಾಧ್ಯತೆಗಳಿದ್ದು, ಇದರಿಂದ ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗ ಉಂಟಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ಘಟಕದ ಸಂಪೂರ್ಣ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ. ಪಿ.ಎಸ್ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ […]