ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಪ್ರಕ್ರಿಯೆಗಳಿಗೆ ಇತಿಶ್ರೀ ಹಾಕಿದ ಸುಪ್ರೀಂ ಕೋರ್ಟ್

ನವದೆಹಲಿ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಹೋರಾಟಕ್ಕೆ ಸಂಪೂರ್ಣ ತೆರೆ ಹಾಕುವ ಹಿನ್ನೆಲೆಯಲ್ಲಿ ಉಮಾಭಾರತಿ, ಮುರಳಿ ಮನೋಹರ್ ಜೋಶಿ, ಸಾಧ್ವಿ ರಿತಂಬರ, ವಿನಯ್ ಕಟಿಯಾರ್ ಹಾಗೂ ಇತರರ ವಿರುದ್ಧದ ನ್ಯಾಯಾಂಗ ನಿಂದನೆ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಕೈಬಿಟ್ಟಿದೆ ಮತ್ತು 1992 ರಲ್ಲಿ ಬಾಬರಿ ಮಸೀದಿ ಧ್ವಂಸದಿಂದ ಉದ್ಭವಿಸಿದ ಪ್ರಕ್ರಿಯೆಗಳನ್ನು ಮುಚ್ಚುವಂತೆ ಆದೇಶಿಸಿದೆ. “ವಿಸ್ತೃತ ಪೀಠದಿಂದ ತೀರ್ಪು ಬಂದಿದೆ. ಈ ವಿಷಯದಲ್ಲಿ ಈಗ ಏನೂ ಉಳಿದಿಲ್ಲ. ನೀವು ಸತ್ತ ಕುದುರೆ ಹೊಡೆಯುವುದನ್ನು ಮುಂದುವರಿಸಲು ಸಾಧ್ಯವಿಲ್ಲ. […]