ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅನುದಾನ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

ಉಡುಪಿ: ಆದಿವಾಸಿ ಜನಾಂಗದವರ ಅಭಿವೃದ್ಧಿಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2.25 ಕೋಟಿ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿ ಕೊರಗರ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಕೊರಗ ಸಮುದಾಯದವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ‌ ಆರಂಭಿಸಿದರು. ಕೊರಗ ಸಮುದಾಯದ ಸಂಘಟನೆ ತಯಾರಿಸಿದ ಜನ ಯೋಜನೆಯನ್ನು ಕೈಬಿಟ್ಟು, ಅಧಿಕಾರಿಗಳು ತಯಾರಿಸಿದ ಕ್ರಿಯಾ ಯೋಜನೆಯನ್ನು ಜಾರಿಗೊಳಿಸಲು ನಿಗಮ ಹೊರಟಿದೆ. ಇದರಿಂದ ಆದಿವಾಸಿ ಜನಾಂಗದವರಿಗೆ ಸರಿಯಾದ ಅನುದಾನ ಹಂಚಿಕೆ ಆಗಲ್ಲ. ಅಲ್ಲದೆ, […]

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ, ಜೂನ್ 14: ಉಡುಪಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ, ಬನ್ನಂಜೆ, ಬಾರ್ಕೂರು, ಮಣಿಪಾಲ, ಆದಿ ಉಡುಪಿ, ಕಿನ್ನಿಮೂಲ್ಕಿ, ಬಡಗಬೆಟ್ಟು, ಕಾಪು, ಹಿರಿಯಡ್ಕ, ಬಲಾಯಿಪಾದೆಯಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸ್/ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಪ್ರವರ್ಗ 1, 2ಎ, 3ಎ, 3ಬಿ, ಪ.ಜಾತಿ ಮತ್ತು ಪ.ಪಂಗಡಗಳ ವಿದ್ಯಾರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ, […]