ಮಾ.9ಕ್ಕೆ ಬಡಗಬೆಟ್ಟು ಸೊಸೈಟಿಯ ನೂತನ ಮಣಿಪಾಲ ಶಾಖೆ ಉದ್ಘಾಟನೆ

ಉಡುಪಿ: ಬಡಗಬೆಟ್ಟು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ 10ನೇ ಹವಾನಿಯಂತ್ರಿತ ಶಾಖೆ ಇದೇ 9ರಂದು ಬೆಳಿಗ್ಗೆ 10ಗಂಟೆಗೆ ಮಣಿಪಾಲ ಕಮರ್ಷಿಯಲ್‌ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್‌ ಹೇಳಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ ಆಶೀರ್ವಚನ ನೀಡುವರು. ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ಶಾಖೆಯನ್ನು ಉದ್ಘಾಟಿಸುವರು ಎಂದರು. […]