ಮಣಿಪಾಲ: ಬಡಗಬೆಟ್ಟು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ನೂತನ ಶಾಖೆ ಉದ್ಘಾಟನೆ

ಉಡುಪಿ: ಬಡಗಬೆಟ್ಟು ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ನೂತನ 10ನೇ ಹವಾನಿಯಂತ್ರಿತ ಶಾಖೆ ಮಣಿಪಾಲ ಕಮರ್ಷಿಯಲ್‌ ಕಾಂಪ್ಲೆಕ್ಸ್‌ನ ಮೊದಲ ಮಹಡಿಯಲ್ಲಿ ಸೋಮವಾರ ಶುಭಾರಂಭಗೊಂಡಿತು. ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ, ಸಮಾಜದೊಂದಿಗೆ ಸಂಸ್ಥೆ ಬೆಳೆಯಬೇಕು. ಸಂಸ್ಥೆಯ ಮೂಲಕ ಸಮಾಜ ಬೆಳೆಯಬೇಕು. ಈ ರೀತಿಯ ಪರಸ್ಪರ ಕೊಡುಕೊಳ್ಳುವಿಕೆಯೊಂದಿಗೆ ಸಮಾಜ ಹಾಗೂ ಸಂಸ್ಥೆ ಮುನ್ನಡೆಯಬೇಕು. ಸಾಮಾಜಿಕ ಬದುಕಿನಲ್ಲಿ ಆರ್ಥಿಕ ವ್ಯವಸ್ಥೆಯ ಸ್ಥಾನ ಏನೆಂಬುವುದನ್ನು ನಾವು ತಿಳಿದುಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಶ್ರಮಿಸುತ್ತಿರುವ ಬಡಗಬೆಟ್ಟು ಸೊಸೈಟಿ ನಿರಂತರವಾಗಿ ಶ್ರೇಯಸ್ಸಿನ […]