ಮಂಗಳೂರು: ನಾಳೆ ಪುರಭವನದಲ್ಲಿ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ

ಮಂಗಳೂರು: ಮಂಗಳೂರಿನಲ್ಲಿ ಬಡಗುತಿಟ್ಟು ಯಕ್ಷಗಾನ ತರಬೇತಿಗಾಗಿ ಮೂರು ವರ್ಷಗಳ ಹಿಂದೆ ಯಕ್ಷಾಭಿನಯ ಬಳಗ ಎಂಬ ಸಂಘವನ್ನು ಹುಟ್ಟುಹಾಕಿ ಯಕ್ಷಗುರು ‘ಯಕ್ಷಶ್ರೀ’ಐರೋಡಿ ಮಂಜುನಾಥ ಕುಲಾಲ್ ಯಡ್ತಾಡಿ ಇವರ ನಿರ್ದೇಶನದಲ್ಲಿ ಯಕ್ಷಗಾನ ತರಬೇತಿಯನ್ನು ನೀಡಲಾಗುತ್ತಿದೆ. ಈ ಸಂಘದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಇಳಿವಯಸ್ಸಿನವರು ಕೂಡಾ ಯಕ್ಷಗಾನದ ತಾಳ ಮತ್ತು ಪ್ರಸಂಗ ಅಭ್ಯಾಸ ಮಾಡುತ್ತಿದ್ದಾರೆ. ಗುರುಗಳ ನಿರ್ದೇಶನದಲ್ಲಿ ಸಂಘದ ಸದಸ್ಯರು ಈಗಾಗಲೇ ಹಲವಾರು ಯಕ್ಷಗಾನ ಪ್ರದರ್ಶನಗಳನ್ನು ನೀಡಿರುತ್ತಾರೆ. ಇದೀಗ ಯಕ್ಷಾಭಿನಯ ಬಳಗದ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಸಂಘದ ಸದಸ್ಯರಿಂದ ಜ 8, […]