ಬೈಂದೂರು: ಜನ ಸಾಮಾನ್ಯರು ಜನಸ್ಪಂದನ ಕಾರ್ಯಕ್ರಮದ ಸದ್ಬಳಕೆ ಮಾಡಿಕೊಳ್ಳಿ – ಗುರುರಾಜ್ ಗಂಟಿಹೊಳೆ

ಬೈಂದೂರು: ಜನ ಸಾಮಾನ್ಯರು ತಮ್ಮ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಲು ಜನಸ್ಪಂದನ ಕಾರ್ಯಕ್ರಮ ಉತ್ತಮ ಅವಕಾಶವಾಗಿದೆ ಇದನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಬುಧವಾರ ಬೈಂದೂರು ತಾಲೂಕು ಆಡಳಿತ ಸೌಧದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಪಟ್ಟಣ ಪಂಚಾಯತ್ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ತಾಲೂಕು ಮಟ್ಟದ ಜನಸ್ಪಂದನ ಸಭೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಜನ ಸಾಮಾನ್ಯರ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಹಲವು ವರ್ಷಗಳಿಂದ ಕಚೇರಿ […]