ಬೈಂದೂರು: ದಾಖಲಾತಿ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ. ಜಪ್ತಿ

ಬೈಂದೂರು: ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಬೈಂದೂರು ಠಾಣೆಯ ಪೊಲೀಸರು ಮಾ.16ರಂದು ಜಪ್ತಿ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಚೆಕ್‌ಪೋಸ್ಟ್‌ನಲ್ಲಿ ಮಾ.16ರಂದು ಮಧ್ಯಾಹ್ನ 1.40ರ ಸುಮಾರಿಗೆ ವಾಹನ ತಪಾಸಣೆ ನಡೆಸುತ್ತಿದ್ದ ಎಸ್‌ಐ ನಿರಂಜನಗೌಡ ಮತ್ತು ಸಿಬ್ಬಂದಿ ಭಟ್ಕಳದಿಂದ ಬಂದ ನೋಂದಣಿ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆದಿದ್ದಾರೆ. ಈ ವೇಳೆ ಕಾರನ್ನು ಪರಿಶೀಲಿಸಿದಾಗ ಹಿಂಬದಿ ಸೀಟಿನ ಕೆಳಗೆ ಪ್ಲಾಸ್ಟಿಕ್ ಬಂಡಲ್ ಇದ್ದು ಅದರಲ್ಲಿ ನಗದು ಕಂಡುಬಂದಿದೆ. ಹಣದ ದಾಖಲೆ ಬಗ್ಗೆ […]