ಅಮರನಾಥದಲ್ಲಿ ವಿಹಿಂಪ ಹಾಗೂ ಬಜರಂಗದಳದಿಂದ ಸೌಜನ್ಯಳಿಗಾಗಿ ಪ್ರಾರ್ಥನೆ

ಶ್ರೀನಗರ: ಬೆಳ್ತಂಗಡಿಯ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳಿಗೆ ಶಿಕ್ಷೆಯಾಗಿ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪುತ್ತೂರಿನ ವಿಶ್ವ ಹಿಂದೂಪರಿಷತ್ ಹಾಗೂ ಬಜರಂಗದಳ ವತಿಯಿಂದ ಅಮರನಾಥದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ವಾಶ್ ರೂಂನಲ್ಲಿ ವೀಡಿಯೋ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

ಉಡುಪಿ: ಇಲ್ಲಿನ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದೂ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಹೇಯ ಕೃತ್ಯವನ್ನು ಖಂಡಿಸಿ, ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ, ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್, ಉಡುಪಿ ಜಿಲ್ಲಾ ಬಜರಂಗದಳ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಗುರುವಾರ ಮಧ್ಯಾಹ್ನ ಜೋಡುಕಟ್ಟೆಯಿಂದ ಪ್ರಾರಂಭಗೊಂಡು ಶ್ರೀ ಕೃಷ್ಣ ಮಠದ ಹಿಂಭಾಗದಲ್ಲಿರುವ ಪಾರ್ಕಿಂಗ್ ವರೆಗೆ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಯಶ್ ಪಾಲ್ […]

ಬಂಟ್ವಾಳ: ಬಿಜೆಪಿ-ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ; ದೂರು ದಾಖಲು

ಚುನಾವಣೋತ್ತರ ಹಿಂಸಾಚಾರದ ಆರೋಪದ ಪ್ರಕರಣದಲ್ಲಿ, ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಬಜರಂಗದಳ ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಯಕರ್ತರು ಆರೋಪಿಸಿದ್ದಾರೆ. ಮೂಲಗಳ ಪ್ರಕಾರ ಬಂಟ್ವಾಳ ತಾಲೂಕಿನ ಮಾಣಿ ಬಳಿ ನಡೆದ ದಾಳಿಯಲ್ಲಿ ಬಜರಂಗದಳ ಕಾರ್ಯಕರ್ತ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಎಂಬುವವರಿಗೆ ಗಾಯಗಳಾಗಿವೆ. ಎರಡು ಗುಂಪುಗಳ ನಡುವಿನ ಸೇಡಿನ ಪ್ರಕ್ರಿಯೆಯಲ್ಲಿಈ ಪ್ರಕರಣ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಶಂಕಿತ ದುಷ್ಕರ್ಮಿಗಳು ಓಮ್ನಿ ಕಾರಿನಲ್ಲಿ […]

ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಪಿ.ಎಫ್.ಐ, ಬಜರಂಗದಳ ನಿಷೇಧ ಪ್ರಸ್ತಾಪ; ಮೀಸಲಾತಿ ಹೆಚ್ಚಳ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಮಂಗಳವಾರ ತನ್ನ ಪ್ರಣಾಳಿಕೆಯನ್ನು ಕಾಂಗ್ರೆಸ್ ಪಕ್ಷವು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ದೊಡ್ಡ ಭರವಸೆಗಳನ್ನು ನೀಡಿರುವ ಕಾಂಗ್ರೆಸ್, ಇಸ್ಲಾಮಿಕ್ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮತ್ತು ಬಜರಂಗ ದಳದಂತಹ “ಹಗೆತನ ಅಥವಾ ದ್ವೇಷವನ್ನು ಉತ್ತೇಜಿಸುವ” ಸಂಘಟನೆಗಳ ಮೇಲೆ ನಿಷೇಧವನ್ನು ಪ್ರಸ್ತಾಪಿಸಿದೆ. ಪಕ್ಷದ ಪ್ರಕಾರ, “ಕಾನೂನು ಮತ್ತು ಸಂವಿಧಾನವು ಪವಿತ್ರವಾಗಿದೆ ಮತ್ತು ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷ ಅಥವಾ ದ್ವೇಷವನ್ನು ಉತ್ತೇಜಿಸುವ ಬಜರಂಗದಳ, ಪಿ.ಎಫ್.ಐ ಅಥವಾ […]

ಉಡುಪಿ: ಗೋಕಳ್ಳತನ, ಅಕ್ರಮ ಗೋಸಾಗಟ ತಡೆಗೆ ಆಗ್ರಹಿಸಿ ವಿ.ಹಿಂ.ಪ-ಬಜರಂಗದಳ ಮನವಿ

ಉಡುಪಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗೋಕಳ್ಳತನ, ಅಕ್ರಮ ಗೋಸಾಗಾಟದ ವಿರುದ್ಧ ಹಾಗೂ ಅದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ವಿಶ್ವ ಹಿಂದು ಪರಿಷತ್-ಬಜರಂಗದಳದ ವತಿಯದ ಉಡುಪಿ ಚಿಕ್ಕಮಂಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಹಾಗೂ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಮನವಿ ಮಾಡಲಾಯಿತು. ಮನವಿಯಲ್ಲಿ ಜಿಲ್ಲಾಡಳಿತ ತಕ್ಷಣ ತೆಗೆದುಕೊಳ್ಳಬೇಕಾದ ಇಪ್ಪತ್ತು ಬೇಡಿಕೆಗಳನ್ನು  ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು […]