ಭಜರಂಗ ದಳ ಬ್ಯಾನ್ ಮಾಡುವ ಯೋಚನೆ? ಕಾಂಗ್ರೆಸ್ ನ ಮಾನಸಿಕತೆಯನ್ನು ತೋರಿಸುತ್ತೆ: ವಿ.ಸುನಿಲ್ ಕುಮಾರ್

ಮಂಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರ ಪ್ರಸ್ತಾಪವಾಗಿರುವುದು ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿದ್ದು, ಇಂಧನ ಸಚಿವ ವಿ.ಸುನಿಲ್ ಕುಮಾರ್ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಜರಂಗದಳ ನಿಷೇಧದ ಮೂಲಕ ರಾಷ್ಟ್ರಭಕ್ತಿಯ ನಿಷೇಧಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಪ್ರಸ್ತಾಪ ಮಾಡುವ ಮೂಲಕ ಕಾಂಗ್ರೆಸ್ ಹಿಂದು ಭಾವನೆಯನ್ನು ಕೆಣಕಿದೆ. ಇದು ಕಾಂಗ್ರೆಸ್ ನಾಯಕರ ಮಾನಸಿಕತೆಯನ್ನು ತೋರಿಸುತ್ತದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿಯನ್ನು ಇದೇ ಡಿ.ಕೆ.ಶಿವಕುಮಾರ್ ಈ ಹಿಂದೆ […]