ಮಲ್ಲಿಕಾರ್ಜುನ ಖರ್ಗೆ-ಭಜರಂಗದಳ ಪ್ರಕರಣ: ಪಂಜಾಬ್ ನ ಸಂಗ್ರೂರ್ ಕೋರ್ಟಿನಿಂದ ಸಮನ್ಸ್
ಸಂಗ್ರೂರ್: ಹಿಂದೂ ಸುರಕ್ಷಾ ಪರಿಷತ್‌ನ ಸಂಸ್ಥಾಪಕ ಹಿತೇಶ್ ಭಾರದ್ವಾಜ್ ಅವರು ಸಲ್ಲಿಸಿರುವ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪಂಜಾಬ್‌ನ ಸಂಗ್ರೂರ್‌ನ ನ್ಯಾಯಾಲಯವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಮನ್ಸ್ ನೀಡಿದೆ. ಇತ್ತೀಚೆಗೆ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಭಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ಪಿ.ಎಫ್.ಐ ಸಂಘಟನೆಯ ಜೊತೆ ಸಮೀಕರಿಸಿತ್ತು ಮತ್ತು ದ್ವೇಷ ಭಾವನೆಗಳನ್ನು ಪ್ರಚೋದಿಸುವ ಸಂಘಟನೆಗಳನ್ನು ನಿಷೇಧಿಸುವ […]