ಕಾಂಗ್ರೆಸ್ ಪ್ರಣಾಳಿಕೆಯಲ್ಲಿ “ಭಜರಂಗದಳ ನಿಷೇಧ”: ಕಾರ್ಕಳ ಬಿಜೆಪಿ ಆಕ್ರೋಶ

ಕಾರ್ಕಳ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇಧಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿರುವುದನ್ನು ಖಂಡಿಸಿ ಕಾರ್ಕಳ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈಗಾಗಲೇ ರಾಜ್ಯ ಬಿಜೆಪಿ ಸರಕಾರ ಪಿಎಫ್ಐ ಭಯೋತ್ಪಾದಕ ಸಂಘಟನೆಯನ್ನು ನಿಷೇಧಿಸಿ, ಅವರ ಕಾನೂನುಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುತಿದ್ದರೂ ಕೂಡ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲೂ ಪಿಎಫ್ಐ ಅನ್ನು ನಿಷೇಧಿಸುವುದಾಗಿ ಹೇಳಿರುವುದು ಹಾಸ್ಯಾಸ್ಪದವಾಗಿದೆ. ಪಿಎಫ್ಐ ಜೊತೆಗೆ ಬಜರಂಗದಳವನ್ನು ಕೂಡ ನಿಷೇಧಿಸುವುದಾಗಿ ತಿಳಿಸಿರುವ ಕಾಂಗ್ರೆಸ್ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ತನ್ನ ಅಧಿಕಾರವಧಿಯಲ್ಲಿ ಪಿಎಫ್ಐ ಜೊತೆಗೆ […]