ಉಡುಪಿ ಜಿಲ್ಲೆಯಾದ್ಯಂತ ಪವಿತ್ರ ಬಕ್ರೀದ್ ಹಬ್ಬದ ಆಚರಣೆ

ಉಡುಪಿ: ಬಕ್ರೀದ್ ಎಂದೂ ಕರೆಯಲ್ಪಡುವ ಇಸ್ಲಾಮಿಕ್ ಹಬ್ಬವಾದ ಈದ್-ಉಲ್-ಅಧಾ ಹಬ್ಬವನ್ನುಇಸ್ಲಾಮಿಕ್ ಚಂದ್ರನ ತಿಂಗಳ ಧು ಅಲ್-ಹಿಜ್ಜಾದ ಹತ್ತನೇ ದಿನದಂದು ಆಚರಿಸಲಾಗುತ್ತದೆ. ಬಕ್ರೀದ್ ಹಬ್ಬವು ತ್ಯಾಗದ ಸಂದೇಶವನ್ನು ಸಾರುತ್ತದೆ. ಉಡುಪಿಯಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿರುವ ವಿವಿಧ ಮಸೀದಿಗಳಲ್ಲಿ ಈದ್ ಪ್ರಯುಕ್ತ ವಿಶೇಷ ನಮಾಜ್ ಸಲ್ಲಿಸಲಾಯಿತು. ಬಳಿಕ ಎಲ್ಲ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಉಡುಪಿಯ ಜಾಮಿಯಾ ಮತ್ತು ಅಂಜುಮಾನ್ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ […]

ಪ್ರಾಣಿಗಳ ಅನಧಿಕೃತ ವಧೆ ಮೇಲೆ ಕಣ್ಗಾವಲಿಡಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಶನಿವಾರ ವರ್ಚುವಲ್ ಮೂಲಕ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಣಿಗಳ ಅನಧಿಕೃತ ವಧೆ ತಡೆಯಲು ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದ […]

ಸೌಹಾರ್ದಯುತ ಬಕ್ರೀದ್ ಆಚರಣೆ: ಮುಂಜಾಗ್ರತಾ ಕ್ರಮ ವಹಿಸಲು ಕಾಂಗ್ರೆಸ್ ಅಲ್ಪ ಸಂಖ್ಯಾ ಘಟಕದಿಂದ ಕಾಪು ಠಾಣೆಯಲ್ಲಿ ಮನವಿ

ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ವತಿಯಿಂದ ನಾಳೆ ಆಚರಿಸುತ್ತಿರುವ ಈದುಲ್ ಅದ್ಹಾ ಹಬ್ಬದಂದು ಕುರ್ಬಾನಿ ಮಾಡಲು, ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುಧ್ದೀನ್ ಶೇಖ್ ಇವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ ಹಮೀದ್ ಯೂಸುಫ್, ಯೂತ್ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸ್ಯೆನ್, ಜಿಲ್ಲಾ ಕಾಂಗ್ರೆಸ್ ಮೀನುಗಾರರ […]

ಬಕ್ರೀದ್ ಹಿನ್ನೆಲೆ ಜಾನುವಾರುಗಳ ಅನಧಿಕೃತ ವಧೆ, ಸಾಗಾಣಿಕೆ ಮೇಲೆ ನಿರ್ಬಂಧ: ಕಣ್ಗಾವಲು ಪಡೆ ರಚನೆ

ಉಡುಪಿ: ಜುಲೈ 10 ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸಂಬಂಧಪಟ್ಟ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ, ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿಯೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಾದ್ಯಂತ ಇರುವ ಚೆಕ್ […]