ಬಾಲಭವನ ಕಚೇರಿ ಸಹಾಯಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಕಚೇರಿ ಸಹಾಯಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆಯೊಂದಿಗೆ, ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಮೇ 11 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574972 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.