ಮಂಗಳೂರು ಬಾಲಭವನದಲ್ಲಿ ಸಂಯೋಜಕ ಹಾಗೂ ಕಚೇರಿ ಸಹಾಯಕ ಹುದ್ದೆ ಖಾಲಿ

ಮಂಗಳೂರು: ಜಿಲ್ಲೆಯ ಬಾಲಭವನದ ಚಟುವಟಿಕೆ ಮತ್ತು ಕಾರ್ಯಕ್ರಮ ನಡೆಸಲು ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ ಮಾಸಿಕ ಗೌರವಧನ 10,000 ರೂ.ಗಳ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಅರ್ಹ ಅಭ್ಯರ್ಥಿಗಳು ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗೆ 2023ರ ಜೂನ್ 6ರೊಳಗೆ ಅರ್ಜಿ ಭರ್ತಿ ಮಾಡಿ ನಗರದ ಬಿಜೈ ನಲ್ಲಿರುವ ಮೆಸ್ಕಾಂ ಹತ್ತಿರದ ಜಿಲ್ಲಾ ಸ್ರೀಶಕ್ತಿ ಭವನ 2ನೇ […]

ಜಿಲ್ಲಾ ಬಾಲಭವನದಲ್ಲಿ ಪ್ರತಿ ಭಾನುವಾರದಂದು ಉಚಿತ ಸೃಜನಾತ್ಮಕ ಚಟುವಟಿಕಾ ಕಾರ್ಯಕ್ರಮಗಳು

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬನ್ನಂಜೆಯ ಜಿಲ್ಲಾ ಬಾಲಭವನದಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಆಗಸ್ಟ್ 21 ರಿಂದ ಪ್ರತಿ ಭಾನುವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರ ವರೆಗೆ ಸೃಜನಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲ, ನೃತ್ಯ, ರಂಗಚಟುವಟಿಕೆ, ಸಾಹಿತ್ಯ, ಯೋಗ, ಸಂಗೀತ ತರಗತಿಗಳನ್ನು ಉಚಿತವಾಗಿ ನಡೆಸಲಾಗುವುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಭವನ, ಉಡುಪಿ ದೂ.ಸಂಖ್ಯೆ: 0820-2574978, 0820-2574972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.