ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ಪುನರಾರಂಭ
ಕುಂದಾಪುರ: ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ ಅಥವಾ ಹುಲಿಕಲ್ ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶನಿವಾರ ರಾತ್ರಿಯಿಂದ ವಾಹನ ಸಂಚಾರ ಪುನರಾರಂಭಗೊಂಡಿದೆ. ಘಾಟಿ ರಸ್ತೆಯ ಕಾಂಕ್ರಿಟೀಕರಣ, ರಕ್ಷಣಾ ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳಾಗಿ ಫೆ. 5ರಿಂದ ಎ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಸಹ್ ಹೊರಡಿಸಿದ್ದರು. ಎ. 5ರಂದು ಕಾಮಗಾರಿ ಪೂರ್ಣಗೊಳ್ಳದ್ದರಿಂದ ನಿಷೇಧವನ್ನು 10 ದಿನಗಳ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಕಾಮಗಾರಿ ಬಹುತೇಕ ಪೂರಾಣಗೊಂಡ ಹಿನ್ನೆಲೆಯಲ್ಲಿ […]