ಪ್ರತಿಭೆ ಪ್ರತಿ ವ್ಯಕ್ತಿಯಲ್ಲೂ ಇರುತ್ತದೆ, ಅರಿತುಕೊಳ್ಳುವ ಪ್ರಯತ್ನ ಮತ್ತು ಮನಸ್ಸು ಮಾಡಬೇಕು: ಡಾ.ಹೆಚ್.ಶಾಂತಾರಾಮ್

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಶೈಕ್ಷಣಿಕ ವರ್ಷ 2018-19ನೇ ಸಾಲಿನ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಆಡಳಿತಾಧಿಕಾರಿ ಡಾ.ಹೆಚ್.ಶಾಂತಾರಾಮ್ ಮಾತನಾಡಿ, ಪ್ರತಿಭೆ ಪ್ರತಿ ವ್ಯಕ್ತಿಯಲ್ಲೂ ಇರುತ್ತದೆ. ಅರಿತುಕೊಳ್ಳುವ ಪ್ರಯತ್ನ ಮತ್ತು ಮನಸ್ಸು ಮಾಡಬೇಕು. ಪೂರಕವಾಗಿ ಒಳ್ಳೆಯ ಸಾಧನೆ ಸಾಧ್ಯವಾಗುತ್ತದೆ. ಶಿಕ್ಷಣವೆಂದರೆ ಕೇವಲ ಪಾಠವಲ್ಲ. ಇದರಲ್ಲಿ ವ್ಯಕ್ತಿತ್ವ ವಿಕಸನವು ಒಂದು ಭಾಗವಾಗಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಸಹಕರಿಸುತ್ತದೆ. ಆದರೆ ಪ್ರತಿಯೊಬ್ಬ ವಿದ್ಯಾರ್ಥಿಯು ಪಾಠಕ್ಕೆ ಪೂರಕವಾಗಿರುವ ಅವಕಾಶಗಳನ್ನು […]