ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್ : ನೀಟ್ ಪರೀಕ್ಷೆಗೆ ಅರ್ಹತಾ ಅಂಕ ಶೂನ್ಯ ವಿಚಾರ

ಬೆಂಗಳೂರು: 2023 ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ವೈದ್ಯಕೀಯ ಹಾಗೂ ದಂತವೈದ್ಯಕೀಯ ಪಿ.ಜಿ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅರ್ಹತಾ ಅಂಕವನ್ನು ಶೂನ್ಯಕ್ಕೆ ಇಳಿಕೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಹುಬ್ಬಳ್ಳಿ ಮೂಲದ ವೈದ್ಯ ಹಾಗೂ ವಕೀಲ ಡಾ. ವಿನೋದ್ ಜಿ. ಕುಲಕರ್ಣಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ […]