ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಆಂಗ್ಲರ ಪಡೆ : ಇದು ವಿಶ್ವಕಪ್‌ ಟೂರ್ನಿಯ ಅತ್ಯಂತ ಮಹತ್ವದ ಪಂದ್ಯ

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್‌ ಭಾಗವಾಗಿ ಇಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್​ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಶ್​ ಬಟ್ಲರ್​ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಲಂಕಾ ಆಟಗಾರರಿಗೆ ಬೌಲಿಂಗ್​ ಮಾಡುವಂತೆ ಆಹ್ವಾನ ನೀಡಿದ್ದಾರೆ. ಉಭಯ ತಂಡಗಳು ತಲಾ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿರುವುದರಿಂದ ಇಂದಿನ ಕಾದಾಟ ಉಭಯ ತಂಡಗಳಿಗೂ ಬಹಳ ಮಹತ್ವದ್ದಾಗಿದೆ. ಎರಡೂ ತಂಡಗಳು ಗೆಲುವಿನ ನಿರೀಕ್ಷೆಯಲ್ಲಿವೆ.ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿದ್ದು ಟಾಸ್​ ಗೆದ್ದ ಆಂಗ್ಲರು […]