ಬೆಂಗಳೂರು : ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ

ಬೆಂಗಳೂರು: ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡವನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ವರ್ಚುವಲ್ ಮೂಲಕ ಇಂದು ಉದ್ಘಾಟಿಸಿದ್ದಾರೆ.3ಡಿ ಪ್ರಿಂಟಿಂಗ್ ಟೆಕ್ನಾಲಜಿ ಬಳಸಿ ನಿರ್ಮಿಸಲಾಗಿರುವ ಅಂಚೆ ಕಚೇರಿ ಕಟ್ಟಡವನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಬೆಂಗಳೂರಿನಲ್ಲಿ ಇಂದು ಉಧ್ಘಾಟನೆ ಮಾಡಿದರು.ಇದು ಸಂಪೂರ್ಣ ಸ್ವಯಂಚಾಲಿತ ಕಟ್ಟಡ ನಿರ್ಮಾಣ ತಂತ್ರಜ್ಞಾನವಾಗಿದ್ದು, ಇದರಲ್ಲಿ ರೊಬೊಟಿಕ್ ಪ್ರಿಂಟರ್ ಅನುಮೋದನೆ ನೀಡಿರುವ ವಿನ್ಯಾಸದ ಪ್ರಕಾರ ವಿಶೇಷ ದರ್ಜೆಯ ಕಾಂಕ್ರೀಟ್ ಅನ್ನು ಲೇಯರ್-ಬೈ-ಲೇಯರ್ ಜೋಡಿಸುತ್ತಾ ಹೋಗುತ್ತದೆ. ಪದರಗಳ ನಡುವಿನ ಬಂಧವನ್ನು ಖಚಿತಪಡಿಸಿಕೊಳ್ಳಲು ತ್ವರಿತವಾಗಿ […]