‘ಸಪ್ಲೈಚೈನ್ ಲೀಡರ್ ಶಿಪ್ -ಎಕ್ಸ್ಪ್ರೆಸ್ ಲಾಜಿಸ್ಟಿಕ್ ಪ್ರಶಸ್ತಿಗೆ ಕೆಎಸ್ಆರ್ಟಿಸಿ ಭಾಜನ
ಬೆಂಗಳೂರು : ದೇಶದ ಸರ್ಕಾರಿ ಸ್ವಾಮ್ಯದ ರಸ್ತೆ ಸಾರಿಗೆ ಸಂಸ್ಥೆಗಳ ನಿರ್ವಹಣೆಯಲ್ಲಿ ಪ್ರಶಸ್ತಿಗಳ ಬೇಟೆಯನ್ನು ಮುಂದುವರೆಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಪ್ರತಿಷ್ಠಿತ ಸಪ್ಲೈ ಚೈನ್ ಲೀಡರ್ ಶಿಪ್ ಪ್ರಶಸ್ತಿ ಲಭಿಸಿದೆ.ಈಗಾಗಲೇ ಹಲವು ಪ್ರಶಸ್ತಿಗಳಿಗೆ ಭಾಜನವಾಗಿರುವ ಕೆಎಸ್ಆರ್ಟಿಸಿಗೆ ಪ್ರತಿಷ್ಠಿತ ಸಪ್ಲೈ ಚೈನ್ ಲೀಡರ್ ಶಿಪ್ ಪ್ರಶಸ್ತಿ, ಎಕ್ಸ್ ಪ್ರೆಸ್ ಲಾಜಿಸ್ಟಿಕ್ ಪ್ರಶಸ್ತಿ ಲಭಿಸಿದೆ. ಇತ್ತೀಚೆಗಷ್ಟೇ ವಿ ಕನೆಕ್ಟ್ ಇಂಡಿಯಾ ಮೀಡಿಯಾ ಅಂಡ್ ರಿಸರ್ಚ್ ಸಂಸ್ಥೆಯಿಂದ ಕೊಡಲಾಗುವ ಏಷ್ಯಾದ ಬ್ಯುಸಿನೆಸ್ ಕ್ವಾಲಿಟಿ ಪ್ರಶಸ್ತಿಗಳಲ್ಲಿ ನಾಲ್ಕು ವರ್ಗದಲ್ಲಿ ಕೆಎಸ್ಆರ್ಟಿಸಿಗೆ […]