ಪಾಕಿಸ್ತಾನಕ್ಕೆ 368 ರನ್‌ಗಳ ಬೃಹತ್ ಗುರಿ : ಆಸ್ಟ್ರೇಲಿಯಾ ಆರಂಭಿಕರ ಸಿಡಿಲಬ್ಬರದ ಬ್ಯಾಟಿಂಗ್

ಬೆಂಗಳೂರು: 5 ಬಾರಿ ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡ ಈ ವರ್ಷ ಮೊದಲೆರಡು ಪಂದ್ಯಗಳನ್ನು ಬ್ಯಾಟಿಂಗ್ ವೈಫಲ್ಯದಿಂದ ಸೋತರೆ, ಮೂರನೇ ಪಂದ್ಯದಲ್ಲಿ ಸಾಧಾರಣ ಪ್ರದರ್ಶನದಿಂದ ಗೆಲುವು ದಾಖಲಿಸಿತ್ತು.ಆದರೆ ಇಂದಿನ ನಾಲ್ಕನೇ ಪಂದ್ಯದಲ್ಲಿ ಭರ್ಜರಿ ಕಮ್ಬ್ಯಾಕ್ ಮಾಡಿದ್ದು, ಪಾಕಿಸ್ತಾನದ ವಿರುದ್ಧ ದೊಡ್ಡ ಇನ್ನಿಂಗ್ಸ್ ಕಟ್ಟಿದೆ. ಆರಂಭಿಕರಾದ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಅವರ ಅಬ್ಬರದ ಶತಕದ ನೆರವಿನಿಂದ ತಂಡವು ನಿಗದಿತ ಓವರ್‌ಗಳ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 367 ರನ್ ಗಳಿಸಿತು. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಇಂದು […]