ಸೆಪ್ಟೆಂಬರ್ 23 ಮತ್ತು 24 ರಂದು ಪರೀಕ್ಷೆ : ಪಿಜಿಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಬಹು ನಿರೀಕ್ಷಿತ ಪಿಜಿ ಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕದಲ್ಲಿನ ವಿವಿಧ ವಿಶ್ವವಿದ್ಯಾಲಯಗಳಲ್ಲಿ 2023ನೇ ಸಾಲಿನ ಪದವಿ ಕೋರ್ಸ್​ಗಳ ಅಂತಿಮ ಸೆಮಿಸ್ಟರ್​ ಪರೀಕ್ಷೆಗಳು ಪೂರ್ಣಗೊಳ್ಳದೇ ಇರುವುದರಿಂದ ಮತ್ತು ಅಭ್ಯರ್ಥಿಗಳ ಹಿತದೃಷ್ಟಿಯಿಂದ ಪಿಜಿಸಿಇಟಿ-2023 ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರಸ್ತುತ ಎಂಬಿಎ, ಎಂಸಿಎ, ಎಂಇ, ಎಂಟೆಕ್, ಎಂ-ಆರ್ಕಿಟೆಕ್ಚರ್ ಕೋರ್ಸ್​ಗಳ ಪ್ರವೇಶಕ್ಕಾಗಿ ಪಿಜಿಸಿಇಟಿ-2023ರ ಪರೀಕ್ಷೆಯನ್ನು ಸೆಪ್ಟೆಂಬರ್ 23 ಮತ್ತು 24 ರಂದು ಪರಿಷ್ಕೃತ ವೇಳಾಪಟ್ಟಿಯಂತೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ. ಸೆಪ್ಟಂಬರ್ 9 ಮತ್ತು 10 ರಂದು ನಡೆಯಬೇಕಿದ್ದ […]