ಅರಣ್ಯ ಇಲಾಖೆಯ ಬೋನಿಗೆ ಬೀಳದ ಚಿರತೆ, ಬೆಂಗಳೂರಿನಲ್ಲಿ ಮುಂದುವರೆದ ಕಾರ್ಯಾಚರಣೆ

ಬೆಂಗಳೂರು: ಕಡೆಂಜಾ (Cadenza) ಅಪಾರ್ಟ್​ಮೆಂಟ್​ ಸಮೀಪ ಚಿರತೆ ಕಾಣಿಸಿಕೊಂಡಿದ್ದು ಸುತ್ತಮುತ್ತ ಹುಡುಕಾಟ ನಡೆಸಲಾಗಿತ್ತು. ಆದರೆ ಚಿರತೆ ತಪ್ಪಿಸಿಕೊಂಡು ಓಡಾಡುತ್ತಿದೆ.ನಗರದ ಹೊರವಲಯದಲ್ಲಿರುವ ಬೊಮ್ಮನಹಳ್ಳಿಯ ಸಿಂಗಸಂದ್ರ ಎಇಸಿಎಸ್ ಲೇಔಟ್‌ನಲ್ಲಿ ನಿನ್ನೆ (ಸೋಮವಾರ) ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಎರಡು ಬೋನುಗಳನ್ನಿಟ್ಟು ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ನಡೆಸಿದ್ದರು. ಬೆಂಗಳೂರಿನ ಹೊರವಲಯದಲ್ಲಿ ಕಾಣಿಸಿಕೊಂಡ ಚಿರತೆ ಸೆರೆ ಹಿಡಿಯಲು ಮೈಸೂರಿನಿಂದ ವಿಶೇಷ ತಂಡ ಆಗಮಿಸಿದೆ. ಮೈಸೂರಿನಿಂದ ವಿಶೇಷ ತಂಡ ಆಗಮನ: ಚಿರತೆ ಕಾರ್ಯಾಚರಣೆಗಾಗಿ ಮೈಸೂರಿನಿಂದ ವಿಶೇಷ ತಂಡ ಬೆಂಗಳೂರಿಗೆ ಆಗಮಿಸಿದೆ. ಈಗಾಗಲೇ ಹಲವೆಡೆ […]