ಆಸ್ಪತ್ರೆಯಿಂದ ಭಾನುವಾರ ಬಿಡುಗಡೆಗೊಳ್ಳಲಿರುವ ಕುಮಾರಸ್ವಾಮಿ: ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಗಮನಾರ್ಹ ಸುಧಾರಣೆ ಕಂಡು ಬಂದಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಎರಡು ದಿನ ಐಸಿಯುನಲ್ಲಿ ಚಿಕಿತ್ಸೆ ನೀಡಿ ಬಳಿಕ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು.ಮಾತಿನಲ್ಲಿ ತೊದಲುವಿಕೆ, ಕೈನಲ್ಲಿ ದುರ್ಬಲತೆ ಕಾಣಿಸಿಕೊಂಡ ಕಾರಣ ಅವರನ್ನು ಬುಧವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಚಲುವರಾಯಸ್ವಾಮಿ, ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದನಾಥ್ ಸ್ವಾಮೀಜಿ ಸೇರಿದಂತೆ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ […]