ಕೆ.ಜಿಗೆ ₹20! 2 ತಿಂಗಳ ನಂತರ ಬೆಲೆಯಲ್ಲಿ ಭಾರಿ ಇಳಿಕೆ

ಬೆಂಗಳೂರು : ಸುಮಾರು ಒಂದೂವರೆ, ಎರಡು ತಿಂಗಳ ಕಾಲ ಕೆ.ಜಿಗೆ 100 ರಿಂದ 150 ರೂಪಾಯಿಯಿದ್ದ ಟೊಮೆಟೊ ಬೆಲೆ ಇದೀಗ 20 ರೂ.ಗೆ ಕುಸಿದಿದೆ. ಆಂಧ್ರಪ್ರದೇಶದ ಮಾರುಕಟ್ಟೆಯಿಂದ ಯಥೇಚ್ಛವಾಗಿ ಟೊಮೆಟೊ ಪೂರೈಕೆಯಾಗುತ್ತಿದೆ. ಬೆಂಗಳೂರು ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರದಿಂದ ಬರುವ ಟೊಮೆಟೊ ಪ್ರಮಾಣವೂ ಹೆಚ್ಚಾಗಿದೆ. ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ನಾಟಿ ಟೊಮೆಟೊ ಬಾಕ್ಸ್ 250 ರಿಂದ 400 ರೂ, ಹೈಬ್ರಿಡ್ ಟೊಮೆಟೊ 250 ರಿಂದ 450 ರೂ. ಗೆ ಇಳಿದಿದೆ. ನಗರದ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ […]