ಆರ್ಯ – ದ್ರಾವಿಡ ರಾಜಕಾರಣದ ಮುಂದುವರಿದ ಭಾಗ ಉದಯನಿಧಿ ಸ್ಟಾಲಿನ್ ಹೇಳಿಕೆ ಖಂಡನೀಯ ಎಂದ ನಳಿನ್‍ಕುಮಾರ್ ಕಟೀಲ್

ಬೆಂಗಳೂರು : ಉದಯನಿಧಿ ಸ್ಟಾಲಿನ್ ಸನಾತನ ಹಿಂದೂ ಧರ್ಮದ ವಿರುದ್ಧ ಅವಹೇಳನ ಮಾಡಿರುವುದು ಖಂಡನೀಯ ಎಂದು ನಳಿನ್‍ಕುಮಾರ್ ಕಟೀಲ್ ಆಕ್ರೋಶ ಹೊರಹಾಕಿದ್ದಾರೆ.ತಮಿಳುನಾಡಿನ ರಾಜಕಾರಣದಲ್ಲಿ ನಿರಂತರವಾಗಿ ಆರ್ಯ – ದ್ರಾವಿಡ ಎಂಬ ಸಮಸ್ಯೆಯನ್ನು ಹುಟ್ಟು ಹಾಕಿ ಅದರ ಮೂಲಕ ರಾಜಕಾರಣ ಮಾಡಲಾಗುತ್ತಿದೆ. ಅದರ ಮುಂದುವರಿದ ಭಾಗವೇ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯಾಗಿದ್ದು, ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ. ಭಾರತದ ಆತ್ಮ ಹಿಂದುತ್ವ. ಈ ದೇಶದ ಬಹುಸಂಖ್ಯಾತ ಜನರು […]