ಕರಾವಳಿಯ ಅಭಿಜಾತ ಕಲಾವಿದ ವಿಲಾಸ್ ನಾಯಕ್ ಕೈಯಲ್ಲಿ ಮೂಡಿದ ಪಂಜುರ್ಲಿ ದೈವ
ಬೆಂಗಳೂರು: ಇಲ್ಲಿನ ಕ್ರೈಸ್ಟ್ ಯುನಿವರ್ಸಿಟಿಯ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ಕರಾವಳಿಯ ಅಭಿಜಾತ ಕಲಾವಿದ ವಿಲಾಸ್ ನಾಯಕ್ ಕುಂಚದಲ್ಲಿ ಮೂಡಿರುವ ಕಾಂತಾರದ ಪಂಜುರ್ಲಿ ದೈವ ನೋಡುಗರ ಮನವನ್ನು ಸೂರೆಗೈದಿದೆ. Exhilarating experience to create Kantara Live Art in front of a massive college audience! @shetty_rishab @hombalefilms #Kantara #Liveart #Bhootakola #Mangalore #Karnataka #India #Culture #Movies #Rishabshetty #Hombale #VilasNayak #Painting #ChristCollege #ChristUniversity pic.twitter.com/Ve0epb8U5y — Vilas Nayak (@VilasNayak) November […]
ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಮೃತ್ತಿಕೆ ಸಂಗ್ರಹಿಸುವ ಅಭಿಯಾನಕ್ಕೆ ಸಚಿವ ಅಂಗಾರ ಚಾಲನೆ
ಉಡುಪಿ: ಶನಿವಾರದಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜಧಾನಿಯಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸುವ ಪೂರ್ವಭಾವಿಯಾಗಿ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಿಸುವ ಅಭಿಯಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಚಾಲನೆ ನೀಡಿ, ಕೆಂಪೇಗೌಡರ ರಥಕ್ಕೆ ಆರತಿ ಬೆಳಗಿ, ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತಿಹಾಸವನ್ನು ತಿಳಿದುಕೊಳ್ಳದೇ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ಇತಿಹಾಸದಲ್ಲಿ ಹಿರಿಯರ ತ್ಯಾಗ ಬಲಿದಾನದಿಂದ ಸಿಕ್ಕಿರುವ ಸ್ವಾತಂತ್ರ್ಯವನ್ನು ನಾವು ಸದುಪಯೋಗ ಪಡಿಸಿಕೊಳ್ಳಬೇಕು. ಬೆಂಗಳೂರಿನ ಸಮಗ್ರ ಬೆಳವಣಿಗೆಗೆ ಬಹಳ […]
ಹಿರಿಯ ಕಲಾವಿದೆ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ
ಬೆಂಗಳೂರು: ಹಿರಿತೆರೆ ಮತ್ತು ಕಿರುತೆರೆಯ ಹಿರಿಯ ಕಲಾವಿದೆ ವಿನಯ್ ಪ್ರಸಾದ್ ಮನೆಯಲ್ಲಿ ಕಳ್ಳತನವಾಗಿರುವುದಾಗಿ ವರದಿಯಾಗಿದೆ. ವಿನಯ್ ಪ್ರಸಾದ್ ಮತ್ತು ಅವರ ಪರಿವಾರದವರು ಮನೆಯಲ್ಲಿಲ್ಲದ ವೇಳೆಯಲ್ಲಿ ಮನೆಗೆ ನುಗ್ಗಿದ ಕಳ್ಳರುಮಲಗುವ ಕೋಣೆಯಲ್ಲಿಟ್ಟಿದ್ದ 7 ಸಾವಿರ ರೂಪಾಯಿನಗದು ಎಗರಿಸಿದ್ದಾರೆ. ಇತರ ವಸ್ತುಗಳು ಕಳವಾಗಿರುವ ಬಗ್ಗೆ ಇನ್ನಷ್ಟೇ ಮಾಹಿತಿ ಬರಬೇಕಿದ್ದು, ಕಳ್ಳತನಕ್ಕೆ ಸಂಬಂಧಿಸಿ ನಟಿ ವಿನಯ ಪ್ರಸಾದ್ ರವರು ನಂದಿನಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಡುಪಿಗೆ ತೆರಳಿದ್ದ ವೇಳೆ ಕಳ್ಳತನ ನಟಿ ವಿನಯ್ ಪ್ರಸಾದ್ ಮತ್ತು ಪತಿ ಜ್ಯೋತಿ […]
ರಾಷ್ಟ್ರಮಟ್ಟದ ಮುಕ್ತ ಟೇಕ್ವಾಂಡೋ ಕ್ರೀಡಾ ಕೂಟ: ಉಡುಪಿ ಜಿಲ್ಲೆಗೆ 41 ಚಿನ್ನ, 9 ಬೆಳ್ಳಿ ಪದಕ
ಉಡುಪಿ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ವಿಸ್ವಾರ್ ಕಪ್ ಪ್ರಥಮ ವರ್ಷದ ರಾಷ್ಟ್ರಮಟ್ಟದ ಮುಕ್ತ ಟೇಕ್ವಾಂಡೋ ಕ್ರೀಡಾ ಕೂಟದಲ್ಲಿ ಉಡುಪಿಯ ಜಿಲ್ಲಾ ಟೇಕ್ವಾಂಡೋ ಆಸೋಸಿಯೇಶನ್ ವಿದ್ಯಾರ್ಥಿಗಳು ಭಾಗವಹಿಸಿ 41 ಚಿನ್ನದ ಪದಕ ಹಾಗೂ 9 ಬೆಳ್ಳಿಯ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಶಸ್ತಿ ವಿಜೇತ ಕರಾಟೆ ಪಟುಗಳಿಗೆ ಲಯನ್ಸ್ ಕ್ಲಬ್ ಬ್ರಹಗಿರಿಯ ಜಿಲ್ಲಾ ಸಂಯೋಜಕ ಲಯನ್ ವಾದಿರಾಜ ರಾವ್ ಅವರು ಶಿರಿಬೀಡುವಿನ ಗೌರಿಆ ರ್ಕೇಡ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದಿಸಿದರು. ಮುಖ್ಯ ಶಿಕ್ಷಕ ರಾಜಶೇಖರ್ , ವರುಣ್ , ದಾದಪೀರ್, ಸಾಥ್ವಿಕ್, […]
ಗಗನಕ್ಕೇರಿದ ಖಾಸಗಿ ಬಸ್ ಟಿಕೆಟ್ ದರ: ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅಧಿಕೃತ ಹೊರೆ
ಬೆಂಗಳೂರು: ಇನ್ನೇನು ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಉಳಿದಿದ್ದು, ಕೆಲಸದ ಪ್ರದೇಶಗಳಿಂದ ತಮ್ಮ ಹುಟ್ಟೂರಿಗೆ ಹಿಂದಿರುಗುವವರ ದಂಡೇ ಬಸ್ ನಿಲ್ದಾಣಗಳಲ್ಲಿ ಕಾಣಸಿಗುತ್ತವೆ. ಈ ಮಧ್ಯೆ ಖಾಸಗಿ ಬಸ್ ದರಗಳು ಗಗನಕ್ಕೇರಿವೆ. ಬೆಂಗಳೂರಿನಿಂದ ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ, ವಿಜಯಪುರ, ಕಲಬುರಗಿ, ಹೈದರಾಬಾದ್ ಮತ್ತು ಚೆನ್ನೈ ನಗರಗಳಿಗೆ ಸಾಗುವ ಖಾಸಗಿ ಬಸ್ ದರಗಳು ಏರಿಕೆಯಾಗಿವೆ. ಹವಾನಿಯಂತ್ರಿತವಲ್ಲದ ಸ್ಲೀಪರ್ ಬಸ್ನಲ್ಲಿ ಸಾಮಾನ್ಯವಾಗಿ 800 ರೂಪಾಯಿ ಬೆಲೆಯ ಸೀಟು ಇದೀಗ 2000 ರೂಪಾಯಿಗೆ ಮಾರಾಟವಾಗುತ್ತಿದೆ. ಹವಾನಿಯಂತ್ರಿತ ಸ್ಲೀಪರ್ ಬಸ್ ನಲ್ಲಿ ಉಳಿದ ದಿನಗಳಲ್ಲಿ […]