ಮಂಗಳೂರಿನಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಗೋವಾದಲ್ಲಿ ಪತ್ತೆ
ಮಂಗಳೂರು: ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನ ಭಾರ್ಗವಿ ಎನ್ನುವ ಬಾಲಕಿ ಸೋಮವಾರ ಮುಂಜಾನೆ 3 ಗಂಟೆಗೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ನಾಪತ್ತೆಯಾಗಿದ್ದ ಘಟನೆ ವರದಿಯಾಗಿತ್ತು. ಈ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ತಮ್ಮ ಫೇಸ್‌ಬುಕ್ ವಾಲ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾಪತ್ತೆಯಾದ ಹುಡುಗಿ ಪತ್ತೆಯಾಗಿದ್ದಾಳೆ ಎಂದು ಹೇಳಿದ್ದಾರೆ. ಇದಕ್ಕಾಗಿ ಅವರು ಜನರಿಗೆ ಧನ್ಯವಾದ ಅರ್ಪಿಸಿದ್ದಾರೆ ಮತ್ತು 14 ವರ್ಷದ ಭಾರ್ಗವಿ ಗೋವಾದಲ್ಲಿ ಪತ್ತೆಯಾಗಿದ್ದು, ಪಣಜಿ ಪೊಲೀಸ್ ಠಾಣೆಯಲ್ಲಿದ್ದಾಳೆ ಎಂದು ಸಮಾಧಾನ ವ್ಯಕ್ತಪಡಿಸಿದ್ದಾರೆ. […]
ನಿಶ್ಚಿತ ಪೂಜಾರಿ ಅವರಿಗೆ ಅಂತಾರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ
ಮಂಗಳೂರು: ಅ.9 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರದ ಪುಷ್ಪದೀಪ ಶಿಕ್ಷಣ ಸಂಸ್ಥೆಯ ನಿಶ್ಚಿತ ಪೂಜಾರಿ ಅವರಿಗೆ ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿಯನ್ನು ಐಟಿಬಿಟಿ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ಪ್ರದಾನ ಮಾಡಿದರು. ಪ್ರಸ್ತುತ ಅವರು ಹಾರ್ವರ್ಡ್ ಫೈರ್ ಮತ್ತು ಸೇಫ್ಟಿ ವಿದ್ಯಾಲಯದ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ […]
ಬೆಂಗಳೂರು ರಸ್ತೆಯಲ್ಲಿ ಗಂಡಾತರದ ಗುಂಡಿಗಳು: ಬಿಬಿಎಂಪಿಗೆ ಎಚ್ಚರಿಕೆ ನೀಡಿದ ರಾಜ್ಯ ಹೈಕೋರ್ಟ್
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಸೋಮವಾರದಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಎಚ್ಚರಿಕೆ ನೀಡಿದ್ದು, ನ್ಯಾಯಾಲಯವು ನಾಗರಿಕ ಸಂಸ್ಥೆಯ ಮೇಲೆ ಕೂಗಾಡದೆ ಇರಬಹುದು, ಅದರರ್ಥ ನಗರದಲ್ಲಿ ಗುಂಡಿಗಳನ್ನು ಮುಚ್ಚುವುದನ್ನು ಖಾತ್ರಿಪಡಿಸುವ ಬಗ್ಗೆ ಅದು ಗಂಭೀರವಾಗಿಲ್ಲ ಎಂದಲ್ಲ ಎಂದು ಹೇಳಿದೆ. ಬಿಬಿಎಂಪಿ ತನ್ನ ಕೆಲಸದ ಬಗ್ಗೆ ಪ್ರಾಮಾಣಿಕವಾಗಿ ವರ್ತಿಸುವಂತೆಯೂ ಹೈಕೋರ್ಟ್ ಹೇಳಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ಪೀಠವು ಬಿಬಿಎಂಪಿ ವಕೀಲರಿಗೆ, “ನೀವು ತುರ್ತು ಅವಶ್ಯಕತೆಯನ್ನು ತಿಳಿಸಿರಿ, ಈ ಪರಿಸ್ಥಿತಿಯ ಗಂಭೀರತೆ ಮತ್ತು […]
ಗಗನಕ್ಕೇರಿದ ಹಸಿರು ಸೊಪ್ಪಿನ ಬೆಲೆ: ಹೈರಾಣಾದ ಗ್ರಾಹಕರು
ಉಡುಪಿ: ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಭಾರೀ ಮಳೆಯು ತರಕಾರಿಗಳ ಬೆಲೆಯನ್ನು ಹೆಚ್ಚಿಸಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ನೆರೆ ಹಾವಳಿಯಿಂದಾಗಿ ಹಸಿರು ಸೊಪ್ಪು ತರಕಾರಿಗಳು ಹೆಚ್ಚು ಹಾನಿಗೊಳಗಾಗಿವೆ. ಪ್ರವಾಹದಿಂದಾಗಿ ಅನೇಕ ಸಣ್ಣ ಮಾರುಕಟ್ಟೆಗಳು ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿರುವುದರಿಂದ ದೊಡ್ಡ ಮಾರುಕಟ್ಟೆಗಳಿಗೆ ತಾಜಾ ತರಕಾರಿಗಳು ಬರುತ್ತಿಲ್ಲ. ಇನ್ನೂ ಕೆಲವು ವಾರಗಳವರೆಗೆ ಈ ಕೊರತೆ ಮುಂದುವರಿಯುವ ಸಾಧ್ಯತೆಯಿದ್ದು, ತರಕಾರಿ ಬೆಲೆಗಳು ಶೀಘ್ರದಲ್ಲೇ ಕಡಿಮೆಯಾಗುವ ಲಕ್ಷಣಗಳಿಲ್ಲ. ಇನ್ನೇನು ಸ್ವಲ್ಪ ದಿನಗಳಲ್ಲೇ ನವರಾತ್ರಿ ಹಬ್ಬ ಮತ್ತು ಮದುವೆ ಸಮಾರಂಭಗಳು ಶುರುವಾಗಲಿದ್ದು, ತರಕಾರಿ ಬೆಲೆಗಳು […]
ಕ್ವಾಂಟಾಸ್ ನ ಸಿಡ್ನಿ – ಬೆಂಗಳೂರು ಉದ್ಘಾಟನಾ ವಿಮಾನದ ಮೆನುವಿನಲ್ಲಿ ತುಳುನಾಡಿನ ಕೋರಿ ಗಸಿ!
ಉಡುಪಿ: ಆಸ್ಟ್ರೇಲಿಯಾ ಮೂಲದ ಕ್ವಾಂಟಾಸ್ ಏರ್‌ವೇಸ್ ಸೆಪ್ಟೆಂಬರ್ 14 ರಂದು ಬೆಂಗಳೂರಿನಿಂದ ಸಿಡ್ನಿಗೆ ಹೊಸ ವಿಮಾನವನ್ನು ಪ್ರಾರಂಭಿಸಿದೆ. ನಿನ್ನೆ ಸಂಜೆ 6.35ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕಾಫ್ ಆಗಿದ್ದು, ದಕ್ಷಿಣ ಭಾರತದಿಂದ ಆಸ್ಟ್ರೇಲಿಯಾಕ್ಕೆ ನೇರವಾಗಿ ಸಂಪರ್ಕ ಕಲ್ಪಿಸುವ ಮೊದಲ ವಿಮಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ನೇರ ವಿಮಾನವು ಬೆಂಗಳೂರಿನಿಂದ ಸಿಡ್ನಿಗೆ ತಲುಪಲು 11 ಗಂಟೆಗಳ ಕಾಲ ತೆಗೆದುಕೊಳ್ಳುತ್ತದೆ. ಸಿಡ್ನಿಯಿಂದ ಹಿಂತಿರುಗುವ ವಿಮಾನ ಬುಧವಾರ ಸಂಜೆ 4.55ಕ್ಕೆ ಬೆಂಗಳೂರಿಗೆ ಬಂದಿಳಿಯಲಿದೆ.ಕ್ವಾಂಟಾಸ್ ಬೆಂಗಳೂರು-ಸಿಡ್ನಿಗೆ ಎ330 ವಿಮಾನವನ್ನು […]