ಬೆಂಗಳೂರಿನ ಡಿಜೆ ಹಳ್ಳಿ ಗಲಭೆ ಪೂರ್ವ ನಿಯೋಜಿತ ಕೃತ್ಯ: ಗೃಹ ಸಚಿವ ಬೊಮ್ಮಾಯಿ

ಉಡುಪಿ: ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿಯಲ್ಲಿ ನಡೆದ ಗಲಭೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಫೇಸ್ ಬುಕ್ ಪೋಸ್ಟ್, ಚರ್ಚೆ ಮೂಲಕ ಹಿಂಸಾಚಾರಕ್ಕೆ ಕರೆ ನೀಡಿದ್ದಾರೆ. ಇದರಲ್ಲಿ ಸಮಾಜ ಘಾತುಕ‌ಶಕ್ತಿಗಳ ಷಡ್ಯಂತ್ರ, ಕುಮ್ಮಕ್ಕು ಕಂಡುಬಂದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಡುಪಿಯಲ್ಲಿ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಘಟನೆ ಸಂಪೂರ್ಣ ನಿಯಂತ್ರಣದಲ್ಲಿದೆ. ಸ್ಥಳದಲ್ಲಿ ಶಾಂತಿ ಕಾಪಾಡಲು ಕ್ರಮಕೈಗೊಳ್ಳಲಾಗಿದೆ ಎಂದರು. *ಮೂರು ಸಿಆರ್ ಪಿಎಫ್ ಪಡೆ ನಿಯೋಜನೆ* ಘಟನೆ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ […]