ರಾಜ್ಯ ಕೈಗಾರಿಕೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ನೀಡಲು ಮುಂದಾದ ಕಾರ್ಮಿಕ ಇಲಾಖೆಯ ಕ್ರಮ ಸ್ವಾಗತಾರ್ಹ.

ಬೆಂಗಳೂರು: ರಾಜ್ಯದ ಕೈಗಾರಿಕೆಗಳ ‘ಸಿ’ ಮತ್ತು ‘ಡಿ’ ಗ್ರೂಪ್‌ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇಕಡ 100ರಷ್ಟು ಮೀಸಲಾತಿ ನೀಡಲು ಮುಂದಾಗಿರುವ ಕಾರ್ಮಿಕ ಇಲಾಖೆ ಕ್ರಮ ಸ್ವಾಗತಾರ್ಹ. ಆದರೆ, ನಿರುದ್ಯೋಗಿ ಕನ್ನಡಿಗರನ್ನು ಗುರುತಿಸಿ, ನೇಮಕಾತಿಗೆ ಅಗತ್ಯ ಪ್ರಮಾಣಪತ್ರ ನೀಡುವ ಕೆಲಸ ಆಗಬೇಕು ಎಂದು ನಟಿ ಪೂಜಾ ಗಾಂಧಿ ಹೇಳಿದ್ದಾರೆ. ಸಿ’ ಮತ್ತು ‘ಡಿ’ ಗ್ರೂಪ್‌ನ ಹುದ್ದೆಗಳಿಗೆ ಕನ್ನಡಿಗರನ್ನು ನೇಮಕ ಮಾಡಿಕೊಳ್ಳಲು ತೊಡಕುಗಳಿಲ್ಲದಿದ್ದರೂ, ಕಂಪನಿಗಳಿಗೆ ನೇಮಕಾತಿ ಪ್ರಕ್ರಿಯೆ ಸುಲಭವಾಗುವಂತೆ ಉದ್ಯೋಗಾಕಾಂಕ್ಷಿ ಕನ್ನಡಿಗರ ಪ್ರತ್ಯೇಕ ಪೋರ್ಟಲ್‌ ತೆರೆಯಬೇಕು. ಕನ್ನಡಿಗ ನಿರುದ್ಯೋಗಿ ಯುವಕ-ಯುವತಿಯರಿಗೆ ಕರುನಾಡಿಗರೆಂಬ […]