ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ

ಉಡುಪಿ: ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಪೂರ್ವ ಸಿದ್ಧತೆ ನಡೆಸಿ ಭವಿಷ್ಯದಲ್ಲಿ ಇಂಜಿನಿಯರ್, ವೈದ್ಯರಾಗ ಬೇಕೆಂಬ ಮಹತ್ವಾಕಾಂಕ್ಷೆಯಿಂದ ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಜನಿವಾರ ಧರಿಸಿದ ಬ್ರಾಹ್ಮಣ ಹಾಗೂ ವಿವಿಧ ಸಮಾಜದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಂದ ಜನಿವಾರವನ್ನು ಕತ್ತರಿಸಿ ತೆಗೆದು ಪರೀಕ್ಷೆ ಬರೆಯಲು ಅನುಮತಿಸುವ ಅಮಾನವೀಯ ಘಟನೆಯ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದು ಮುಸ್ಲಿಂ ಓಲೈಕೆಗೆ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ […]
ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಪರೀಕ್ಷಾ ಸಿಬ್ಬಂದಿ: ಆರೋಪ

ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಜನಿವಾರವನ್ನು ಕತ್ತರಿಸಿದ್ದಾರೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾವು ಶಿವಮೊಗ್ಗ ಜಿಲ್ಲಾಧಿಕಾರಿಗೆ ದೂರು ನೀಡಿರುವುದಾಗಿ ವರದಿಯಾಗಿದೆ. ಬುಧವಾರದಂದು ಶಿವಮೊಗ್ಗದ ಪರೀಕ್ಷಾ ಕೇಂದ್ರದಲ್ಲಿ ತಪಾಸಣೆ ನಡೆಸುವ ವೇಳೆ ಬ್ರಾಹ್ಮಣ ಸಮುದಾಯದವರ ಜನಿವಾರಗಳನ್ನು ಒತ್ತಾಯಪೂರ್ವಕವಾಗಿ ತೆಗೆಸಲಾಗಿದೆ. ಇದು ಧಾರ್ಮಿಕ ಭಾವನೆಗಳ ಮೇಲೆ ಮಾಡಿರುವ ಪ್ರಹಾರವಾಗಿದ್ದು, ಇದರಿಂದ ಪೋಷಕರಿಗೆ ಅನ್ಯಾಯವಾಗಿದೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು […]