ಮನೆ ಊಟ ಪಡೆಯಲು ಅನುಮತಿ ನೀಡುವಂತೆ ನಟ ದರ್ಶನ್ ಹೈಕೋರ್ಟ್ ಗೆ ಮನವಿ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಮನೆಯಿಂದ ಊಟ, ಹಾಸಿಗೆ, ಪುಸ್ತಕಗಳನ್ನು ಪಡೆಯಲು ಅನುಮತಿ ಕೋರಿ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಇದರಿಂದ ಅತಿಸಾರ ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದರ್ಶನ್ ಪರ ವಕೀಲರು ಉಲ್ಲೇಖಿಸಿದ್ದಾರೆ. ದರ್ಶನ್ ಅವರ ದೇಹದ ತೂಕ ಕೂಡ […]