ಬೆಂಗಳೂರಲ್ಲಿ ಜುಲೈ 26-27 ರಂದು ‘ಕುಂದಾಪ್ರ ಕನ್ನಡ ಹಬ್ಬ’

ಬೆಂಗಳೂರು: ರಾಜಧಾನಿ ಬೆಂಗಳೂರಿನ ʼಕುಂದಾಪ್ರ ಕನ್ನಡ ಪ್ರತಿಷ್ಠಾನ (ರಿ.)ʼ ವರ್ಷಂಪ್ರತಿ ಆಯೋಜಿಸುವ ʼಕುಂದಾಪ್ರ ಕನ್ನಡ ಹಬ್ಬʼ ಈ ಸಲ ಜುಲೈ 26 ಮತ್ತು 27ರಂದು ಬೆಂಗಳೂರಿನ ಹೊಸಕೆರೆಹಳ್ಳಿ ನೈಸ್ ರೋಡ್ ಜಂಕ್ಷನ್ ಬಳಿ ಇರುವ ನಂದಿ ಲಿಂಕ್ ಗ್ರೌಂಡ್ನಲ್ಲಿ ನಡೆಯಲಿದೆ ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ.ದೀಪಕ್ ಶೆಟ್ಟಿ ಬಾರ್ಕೂರು ತಿಳಿಸಿದ್ದಾರೆ. ʼಕುಂದಾಪ್ರ ಕನ್ನಡ ಹಬ್ಬ-2025ʼರ ಕುರಿತು ಗುರುವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಆರನೇ ಕುಂದಾಪ್ರ ಕನ್ನಡ ಹಬ್ಬವಾಗಿದ್ದು, ಈ ಸಲ ಇದನ್ನು […]