ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀಟರ್‌ಗೆ 2 ರೂ. ಹೆಚ್ಚಳ: ನಾಳೆಯಿಂದಲೇ ಪರಿಷ್ಕೃತ ದರ ಜಾರಿ.

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 2 ರುಪಾಯಿ ಏರಿಕೆ ಮಾಡಲಾಗಿದ್ದು, ನಾಳೆಯಿಂದ ಒಂದು ಲೀಟರ್ ಹಾಲಿನ ದರ 44 ರೂ. ಆಗುತ್ತಿದೆ. ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ ಎಂದು ಅಧ್ಯಕ್ಷ ಭೀಮನಾಯ್ಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ಲೀಟರ್ ಹಾಲಿಗೆ 2 ರೂ.ಏರಿಕೆ ಮಾಡಲಾಗಿದೆ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ. […]