ಬೆಂಗಳೂರು: ಯುವತಿಯನ್ನು ಮನೆಗೆ ಬಿಡುವುದಾಗಿ ಹೇಳಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ: ಕೆಲವೇ ಗಂಟೆಗಳಲ್ಲಿ ಆರೋಪಿ ಅರೆಸ್ಟ್.

ಬೆಂಗಳೂರು: ಡ್ರಾಪ್ ನೀಡುವ ನೆಪದಲ್ಲಿ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಎಸ್ ಆರ್ ಲೇಔಟ್ ಪೊಲೀಸರು ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಿದ್ದಾರೆ. ಆ.18 ರಂದು ಮುಂಜಾನೆ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ವ್ಯಾಪ್ತಿಯ ಹೊಸೂರು ಸರ್ವಿಸ್ ರಸ್ತೆಯ ಪ್ರತ್ಯೇಕ ಸ್ಥಳದಲ್ಲಿ ಈ ಘಟನೆ ನಡೆದಿದೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಸಂತ್ರಸ್ತೆಯ ಹೇಳಿಕೆ ಮತ್ತು ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಮಾಹಿತಿಯನ್ನು ಪಡೆದು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಗಳ ಬಗ್ಗೆ ಹೆಚ್ಚಿನ […]