ಇಂದು ಬೆಂಗಳೂರಲ್ಲಿ ಆರ್‌ಸಿಬಿ-ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ; ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ.!

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಹುನಿರೀಕ್ಷಿತ ಹೈವೋಲ್ಟೇಜ್ ಪಂದ್ಯ ಇಂದು ನಡೆಯಲಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಆರ್‌ಸಿಬಿ ಮತ್ತು ಸಿಎಸ್‌ಕೆ ತಂಡಗಳು ಸೆಣಸಾಡಲಿವೆ. ಆದರೆ, ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಭೀತಿ ಎದುರಾಗಿದೆ. ಬೆಂಗಳೂರಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ನಗರದಲ್ಲಿ ಬೆಳಗ್ಗೆಯಿಂದ ಮೋಡ ಮುಸುಕಿದ ವಾತಾವರಣವಿದೆ. ಸಂಜೆ ಮಳೆ ಸುರಿಯುವ ಸಾಧ್ಯತೆ ಇದೆ. ಶುಕ್ರವಾರದ ಅಭ್ಯಾಸದ ಶಿಬಿರಕ್ಕೂ ಮಳೆ ಅಡ್ಡಿಪಡಿಸಿತ್ತು. ಶನಿವಾರ ಕೂಡ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. […]