ಮೃತದೇಹ ಹೊತ್ತು ಕಣ್ಣೀರಿಟ್ಟ ಪೊಲೀಸ್ ಸಿಬ್ಬಂದಿಗಳ ತಲೆದಂಡ ಎಷ್ಟು ಸರಿ..??

ಉಡುಪಿ: ಐಪಿಎಲ್ ಟ್ರೋಫಿ ಗೆದ್ದ RCB ತಂಡದ ಆಟಗಾರರು ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಕೈಗೊಂಡ ಸಂದರ್ಭದಲ್ಲಿ 11 ಜನ ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗಿರುವುದು ವಿಪರ್ಯಾಸ. ಫ್ರ್ಯಾಂಚೈಸಿ ಒಂದರ ಗೆಲುವನ್ನು ತಮ್ಮ ಗೆಲುವೆಂದು ಬಿಂಬಿಸಲು ಹೊರಟ ರಾಜ್ಯ ಸರ್ಕಾರ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವುದಕ್ಕೆ ಪೊಲೀಸ್ ಇಲಾಖೆ ಅನುಮತಿ ನಿರಾಕರಣೆ ಮಾಡಿದ್ದರು. ಆದರೆ ಈಗ ಅದೇ ಪೊಲೀಸ್ ಸಿಬ್ಬಂದಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿರುವುದು ಎಷ್ಟು ಸರಿ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ಪ್ರಮುಖ ಶ್ರೀನಿಧಿ ಹೆಗ್ಡೆ ಪ್ರಶ್ನಿಸಿದ್ದಾರೆ. […]