ರಾಜ್ಯ ಸರಕಾರದ ಉದ್ಯೋಗಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು; ರಾಜ್ಯ ಸರ್ಕಾರದ ಎಲ್ಲಾ ನೇಮಕಾತಿಗಳಲ್ಲಿ ಎಲ್ಲಾ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಒಂದು ಬಾರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರದ ಆದೇಶ ಹೊರಡಿಸಿದೆ. ಖಾಲಿ ಹುದ್ದೆಗಳ ಭರ್ತಿ, ನೇಮಕಾತಿಯ ವಯೋಮಿತಿ ಹೆಚ್ಚಳ ಮತ್ತು ಕೆಎಎಸ್ ಅಧಿಸೂಚನೆಯಲ್ಲಿ ಕಂಡುಬಂದಿರುವ ಕನ್ನಡ ಅನುವಾದದ ತಪ್ಪುಗಳನ್ನು ಪರಿಶೀಲಿಸಿ ಅಧಿಸೂಚನೆ ರದ್ದುಪಡಿಸಲು ಆಗ್ರಹಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತೆ ಜನಪ್ರತಿನಿಧಿಗಳು, ಸಂಘಟನೆಗಳು […]