ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ನಗರ ವಿಖ್ಯಾತಿ ಪಡೆದಿದೆ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ನಾಡಪ್ರಭು ಕೆಂಪೇಗೌಡರು ದೂರದೃಷ್ಠಿ ಇಟ್ಟುಕೊಂಡು ನಿರ್ಮಿಸಿದ ಬೆಂಗಳೂರು ನಗರ ಕೋಟ್ಯಾಂತರ ಜನರ ಬದುಕು ಕಟ್ಟಿಕೊಳ್ಳಲು ಆಶ್ರಯ ಆಗುವುದರ ಜೊತೆಗೆ ವಿಶ್ವವಿಖ್ಯಾತಿ ನಗರವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. 15-16 ನೇ ಶತಮಾನದ […]