ಎಸ್‌ಸಿಡಿಸಿಸಿ ಬ್ಯಾಂಕ್ ನ 111ನೇ ಶಾಖೆಯ ಉದ್ಘಾಟನೆ, ನವೋದಯ ಸ್ವಸಹಾಯ ಸಂಘಗಳ ಸಾಧನಾ ಸಮಾವೇಶ

ಮಣಿಪಾಲ: ಎಸ್‌ಸಿಡಿಸಿಸಿ ಬ್ಯಾಂಕ್ ನ 111ನೇ ನೂತನ ಶಾಖೆಯು ಇದೇ ಬರುವ ಮೇ 2ರಂದು ಮಣಿಪಾಲದ ಕಮರ್ಷಿಯಲ್ ಕಾಂಪ್ಲೆಕ್ಸ್‌ನ ನೆಲ ಅಂತಸ್ತಿನಲ್ಲಿ ಕಾರ್ಯಾರಂಭಗೊಳ್ಳಲಿದೆ. ಇದು ಸಂಪೂರ್ಣ ಗಣಕೀಕೃತಗೊಂಡ ಹವಾನಿಯಂತ್ರಿತ ಶಾಖೆಯಾಗಿದ್ದು, ಆರ್‌ಟಿಜಿಎಸ್, ನೆಫ್ಟ್, ಎಟಿಎಂ ಹಾಗೂ ಕೋರ್ ಬ್ಯಾಂಕಿಂಗ್ ಸೌಲಭ್ಯವನ್ನು ಒಳಗೊಂಡಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು. ಬುಧವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 2ರಂದು ಬೆಳಿಗ್ಗೆ 10.30ಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ […]

ರಾಷ್ಟ್ರೀಕೃತ ಬ್ಯಾಂಕ್ ವಿಲೀನ ಸಹಕಾರಿ ಕ್ಷೇತ್ರದ ಮೇಲೆ‌ ಪರಿಣಾಮ ಬೀರಲ್ಲ: ಜಿ.ಆರ್. ಪ್ರಸಾದ್

ಉಡುಪಿ: ಸಹಕಾರ ಕ್ಷೇತ್ರದ ವಾತಾವರಣ ಸದ್ಯ ವಿಷಮ ಸ್ಥಿತಿಯಲ್ಲಿದ್ದು, ಅದನ್ನು ಉತ್ತಮವಾಗಿ ನಡೆಸಲು ಪ್ರೇರೇಪಿಸಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆಯೂ ಸಹಕಾರಿ ಕ್ಷೇತ್ರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಂಗಳೂರಿನ ಪ್ರಣವ ಸೌಹಾರ್ದ ಸಹಕಾರಿಯ ಅಧ್ಯಕ್ಷ ಜಿ.ಆರ್‌. ಪ್ರಸಾದ್‌ ಹೇಳಿದರು. ಉಡುಪಿ ಜಿಲ್ಲಾ ಸೌಹಾರ್ದ ಒಕ್ಕೂಟ ಮತ್ತು ಬೆಳಗಾವಿಯ ಫಾರ್ಚೂನ್‌ ಇನೋಸರ್ವ್‌ ಪ್ರೈ.ಲಿ. ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಗರದ ಡಯಾನ ಹೋಟೆಲ್‌ನ ಸಭಾಂಗಣದಲ್ಲಿ ಶನಿವಾರ ನಡೆದ ಸಹಕಾರಿ ಕ್ಷೇತ್ರ ಸಂವರ್ಧನೆಯಿಂದ ಸಮೃದ್ಧಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ […]