ಕುಂದಾಪುರ: ಕೇಂದ್ರದ ವಿಲೀನ ಪ್ರಕ್ರಿಯೆ ವಿರೋಧಿಸಿ ಬ್ಯಾಂಕ್ ನೌಕರರ ಪ್ರತಿಭಟನೆ

ಕುಂದಾಪುರ: ರಾಷ್ಟ್ರೀಕೃತ ಬ್ಯಾಂಕ್‌ಗಳಾದ ಬ್ಯಾಂಕ್ ಆಫ್ ಬರೋಡಾ, ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್‌ಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ಬ್ಯಾಂಕ್ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ಬುಧವಾರ ಕುಂದಾಪುರದ ಸಿಂಡಿಕೇಟ್ ಬ್ಯಾಂಕ್ ಮುಖ್ಯ ಶಾಖೆಯ ಬಳಿ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಬ್ಯಾಂಕ್ ನೌಕರರ ಸಂಘಟನೆಯ ಅಧ್ಯಕ್ಷ ರಾಮ್ ಮೋಹನ್, ಬ್ಯಾಂಕ್‌ಗಳ ವಿಲೀನವನ್ನು ಕೇಂದ್ರ ಸರ್ಕಾರ ಕೂಡಲೇ ಕೈಬಿಡಬೇಕು. ಬ್ಯಾಂಕ್‌ಗಳ ವಿಲೀನದಿಂದ ಏನನ್ನೂ ಸಾಧಿಸಲಾಗದು ಎನ್ನುವುದು ಈಗಾಗಲೇ ಸಾಬೀತಾದರೂ ಕೂಡ ಸರ್ಕಾರದ ಈ ನಡೆ […]