ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ

ಉಡುಪಿ: ರಾಷ್ಟ್ರೀಯ ಗ್ರಂಥಾಲಯದ ಸಪ್ತಾಹ- 2023 ಇದರ ಅಂಗವಾಗಿ ವಿದ್ಯಾ ವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಕನ್ನಡ ಪುಸ್ತಕ ಓದಿ ಗ್ರಹಣ ಶಕ್ತಿ ಬೆಳೆಸುವ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಅಜ್ಜರಕಾಡಿನ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕಿ ಹಾಗೂ ಸಾಹಿತಿ ಗಿರಿಜಾ ಹೆಗಡೆ ಗಾಂವ್ಕರ್ಮತ್ತು ಹಿರಿಯ ಸಾಹಿತಿ ಸಂಗೀತಾ ಜಾನ್ಸನ್ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಗಿರಿಜಾ ಹೆಗಡೆ ಗಾಂವ್ಕರ್ […]