ಹಫ್ತಾ ನೀಡುವಂತೆ ಉದ್ಯಮಿಗೆ ಬೆದರಿಕೆ: ಭೂಗತ ಪಾತಕಿ ಬನ್ನಂಜೆ ರಾಜನ ಸಹಚರರ ಬಂಧನ

ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜ ಹೆಸರಲ್ಲಿ ಉಡುಪಿಯ ಉದ್ಯಮಿಯೊಬ್ಬರಿಗೆ ಹಫ್ತಾಕ್ಕಾಗಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಐಬಿ ಪೊಲೀಸರು ಐದು ಮಂದಿ ಆರೋಪಿಗಳನ್ನು ಗುರುವಾರ ರಾತ್ರಿ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಮುಲ್ಕಿ ಕೋಲ್ನಾಡು ನಿವಾಸಿ ಶಶಿ ಪೂಜಾರಿ ಅಲಿಯಾಸ್ ಶ್ಯಾಡೋ (28), ರವಿಚಂದ್ರ ಪೂಜಾರಿ ಅಲಿಯಾಸ್ ವಿಕ್ಕಿ ಪೂಜಾರಿ (30), ಮಂಗಳೂರು ಪೆರ್ಮಂಕಿ ನಿವಾಸಿ ಧನರಾಜ್ ಪೂಜಾರಿ ಅಲಿಯಾಸ್ ಧನರಾಜ್ ಯಾನೆ ರಾಕ್, (26) ಎಂಬುವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳ ಮಾಹಿತಿಯ ಆಧಾರದ ಮೇಲೆ ಇಂದು […]