ವಿ.ಎಸ್.ಆಚಾರ್ಯ ಬಸ್ ನಿಲ್ದಾಣಕ್ಕೆ ಗಡಿಯಾರ ಹಸ್ತಾಂತರ

ಉಡುಪಿ: ಬನ್ನಂಜೆಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ  ‘ವಿ.ಎಸ್.ಆಚಾರ್ಯ’ ಬಸ್ ನಿಲ್ದಾಣಕ್ಕೆ, ವಿಷ್ಣು ಸೇಲ್ಸ್ ನ ಮಾಲೀಕ ವಿಷ್ಣುಪ್ರಸಾದ್ ಪಾಡಿಗಾರ್ ಮತ್ತು ಲಂಡನ್ ಟೈಮ್ಸ್ ನ ಮಾಲೀಕ ಸುಭಾಷ್ ಇವರು ಉಡುಗೊರೆ ನೀಡಿದ ಮೂರು ಗಡಿಯಾರಗಳನ್ನು ಸಾರಿಗೆ ನಿಗಮದ ಮಂಗಳೂರು ವಿಭಾಗದ ನಿಯಂತ್ರಣಾಧಿಕಾರಿಗಳಾದ ರಾಜೇಶ್ ಶೆಟ್ಟಿ ಇವರಿಗೆ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಪರವಾಗಿ ಮಠದ ದಿವಾನರಾದ ವರದರಾಜ ಭಟ್ ರವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಭಾಗ ಸಂಚಲನಾಧಿಕಾರಿ ಮರಿಗೌಡ, ಉಡುಪಿ ಘಟಕ […]

ಸೆ 18 ರಂದು ಬನ್ನಂಜೆ ನಾರಾಯಣಗುರು ಸಭಾಭವನದಲ್ಲಿ ಓಣಂ ಆಚರಣೆ

ಉಡುಪಿ: ಕೇರಳ ಕಲ್ಚರಲ್ ಆಂಡ್ ಸೋಶಿಯಲ್ ಸೆಂಟರ್ ಉಡುಪಿ ಇದರ 29ನೇ ವಾರ್ಷಿಕೊತ್ಸವ ಮತ್ತು ಓಣಂ ಹಬ್ಬ ಆಚರಣೆಯು ಸೆಪ್ಟೆಂಬರ್ 18 ಭಾನುವಾರದಂದು ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ ಎಂದು ಓಣಂ ಹಬ್ಬ ಆಚರಣೆಯ ಕಮಿಟಿ ಅಧ್ಯಕ್ಷ ಟಿ ಎ ರವಿರಾಜನ್ ಹೇಳಿದರು. ಕೇರಳ ಕಲ್ಚರಲ್ ಆಂಡ್ ಸೋಶಿಯಲ್ ಸೆಂಟರ್ ಉಡುಪಿ ಇದರ 29ನೇ ವಾರ್ಷಿಕೊತ್ಸವ ಮತ್ತು ಓಣಂ ಹಬ್ಬ ಆಚರಣೆಯು ಸೆಪ್ಟೆಂಬರ್ 18 ಭಾನುವಾರದಂದು ಬನ್ನಂಜೆಯ ನಾರಾಯಣಗುರು ಸಭಾಭವನದಲ್ಲಿ ನಡೆಯಲಿದೆ ಕಾರ್ಯಕ್ರಮದ ಮೊದಲು ಈ ಸಾಲಿನ […]

ನಾರಾಯಣ ಗುರುಗಳ ತತ್ವಾದರ್ಶ ಪಾಲಿಸಿ ವಿಶ್ವಶಾಂತಿಗೆ ಮುಂದಡಿಯಿಡಬೇಕು: ಸಚಿವ ಸುನಿಲ್ ಕುಮಾರ್

ಉಡುಪಿ: ಎಲ್ಲಾ ಧರ್ಮಗಳು ಮನುಷ್ಯನ ಒಳಿತನ್ನೇ ಬಯಸುತ್ತವೆ ಎಂಬ ನಾರಾಯಣಗುರುಗಳ ಸಂದೇಶ ಅರಿಯುವ ಮೂಲಕ ವಿಶ್ವದಾದ್ಯಂತ ವಿವಿಧ ಧರ್ಮಗಳ ನಡುವೆ ನಡೆಯುತ್ತಿರುವ ವಾದವನ್ನು ಕೊನೆಗಾಣಿಸಿ, ವಿಶ್ವಶಾಂತಿ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು. ಅವರು ಶನಿವಾರ ಬನ್ನಂಜೆಯ ನಾರಾಯಣ ಗುರು ಸಭಾಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬಿಲ್ಲವರ ಸೇವಾ ಸಂಘ ಬನ್ನಂಜೆ ಇವರ ಸಹಯೋಗದಲ್ಲಿ ನಡೆದ ಬ್ರಹ್ಮಶ್ರೀ […]

ಬನ್ನಂಜೆ: ಸೆಪ್ಟೆಂಬರ್ 10 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಲ್ಲವರ ಸೇವಾ ಸಂಘ ಬನ್ನಂಜೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ಸೆಪ್ಟಂಬರ್ 10 ರಂದು ಬೆಳಗ್ಗೆ 10.30 ಕ್ಕೆ ನಗರದ ಬನ್ನಂಜೆ ಶ್ರೀ ನಾರಾಯಣ ಗುರು ಮಂದಿರದ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. […]

ಸೆಪ್ಟೆಂಬರ್ 3 ರಂದು ನವೀಕೃತ ನಾರಾಯಣಗುರು ಆಡಿಟೋರಿಯಂ ಲೋಕಾರ್ಪಣೆ

ಉಡುಪಿ: ಬನ್ನಂಜೆ ಬಿಲ್ಲವರ ಸೇವಾ ಸಂಘದ ನವೀಕೃತ ನಾರಾಯಣಗುರು ಆಡಿಟೋರಿಯಂ ಸೆಪ್ಟೆಂಬರ್ ೩ ಶನಿವಾರ ಸಂಜೆ 4 ಗಂಟೆಗೆ ಲೋಕಾರ್ಪಣೆಗೊಳ್ಳಲಿದ್ದು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ವಿ. ಸುನಿಲ್ ಕುಮಾರ್, ಶಾಸಕ ರಘುಪತಿ ಭಟ್, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ಕಟಪಾಡಿ ವಿಶ್ವನಾಥ ಕ್ಷೇತ್ರದ ಬಿ.ಎನ್. ಶಂಕರ ಪೂಜಾರಿ, ನಗರಸಭಾ ಸದಸ್ಯೆ ಸವಿತಾ ಹರೀಶ್ ರಾಂ ಉಪಸ್ಥಿತರಿರಲಿದ್ದಾರೆ. ಸಂಜೆ 4 […]